Breaking News

ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣ ಏನು?

ABVP

 

ಕುಂದಾಪುರ: ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಶಾಸ್ತ್ರಿ ವೃತ್ತದಿಂದ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ ಮಾತನಾಡಿ, ಮಂಗಳೂರು ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುತ್ತಿಲ್ಲ. ಈ ಕಾರಣದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆ ಉಂಟಾಗುತ್ತಿದೆ. ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ ಇರುವುದು, ಮರು ಪರೀಕ್ಷೆ ಹಾಗೂ ಮರುಮೌಲ್ಯಮಾಪನಗಳಲ್ಲಿ ಗೊಂದಲ, ಮರು ಮೌಲ್ಯಮಾಪನದಲ್ಲಿ ನಿಗದಿ ಪಡಿಸಿದ ಅಂಕ ಬಂದರೂ ಕಟ್ಟಿದ ಶುಲ್ಕವು ಮರುಪಾವತಿ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಎನ್.ಇ.ಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ದ್ವಿತೀಯ ವರ್ಷದಲ್ಲಿ ಇದ್ದರೂ, ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನ ಈವರೆಗೂ ಆಗಿಲ್ಲ. ಆದಾಗ್ಯೂ ತೃತೀಯ ಸೆಮಿಸ್ಟರ್ ನಲ್ಲಿರುವ ವಿದ್ಯಾರ್ಥಿಗಳಿಗೆ ಈ ಹಿಂದಿನ ಎರಡು ಸೆಮಿಸ್ಟರ್ ನ ಫಲಿತಾಂಶ ಇಲ್ಲದಿದ್ದರೂ ಮೂರನೇ ಸೆಮಿಸ್ಟರ್ ನ ಪರೀಕ್ಷಾ ಶುಲ್ಕವನ್ನು ಪಡೆದುಕೊಂಡಿದ್ದಾರೆ.ಮಂಗಳೂರು ವಿಶ್ವವಿದ್ಯಾಲಯದ ಈ ಎಲ್ಲಾ ಬೇಜಾವಾಬ್ದಾರಿತನದಿಂದಾಗಿ ಮಕ್ಕಳು ಹಾಗೂ ಪೋಷಕರು ತಲೆತಗ್ಗಿಸುವಂತೆ ಆಗಿದೆ ಎಂದರು.

  1.  

ವಿದ್ಯಾರ್ಥಿಗಳ ಇಂದಿನ ಈ ಸ್ಥಿತಿಗೆ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ನೇರ ಹೊಣೆಯಾಗಿದ್ದಾರೆ. ಸಂಬಂದಪಟ್ಟವರು ವಿದ್ಯಾರ್ಥಿಗಳು ಅನುಭವಿಸುತ್ತಿರುವ ತೊಂದರೆಗಳನ್ನು ಶೀಘ್ರವೇ ಪರಿಹರಿಸಬೇಕು ಎಂದರು.

ಕುಂದಾಪುರದ ಡಾ.ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಭಂಡಾರ್ ಕಾರ್ಸ್ ಕಾಲೇಜು ಹಾಗೂ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪದವಿ ಕಾಲೇಜು ಕಾಗೇರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಸಂಚಾಲಕ್ ಧನುಷ್ ಪೂಜಾರಿ, ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ ,ಬಿ.ಬಿ ಹೆಗ್ಡೆ ಕಾಲೇಜು ಘಟಕದ ಅಧ್ಯಕ್ಷ ವಿಘ್ನೇಶ್ ಶೆಟ್ಟಿ, ಭಂಡಾರ್ಕಾರ್ಸ್ ಕಾಲೇಜು ಘಟಕದ ಅಧ್ಯಕ್ಷ ವೀಕ್ಷಿತ್, ಕಾಗೇರಿ ಕಾಲೇಜು ಘಟಕದ ಅಧ್ಯಕ್ಷ ಚೇತನ್ ಇದ್ದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com