Breaking News

ಅಪ್ರಾಪ್ತೆ ಜತೆ ಅನುಚಿತ ವರ್ತನೆ: ವ್ಯಕ್ತಿಗೆ ಥಳಿತ

crime

 

ಮಂಗಳೂರು: ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್‌ನಲ್ಲಿ ಹಿಂಬಾಲಿಸಿ ಬಾಲಕಿ ಜತೆಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧನ ಮಾಡಿದ್ದಾರೆ.

  1.  

ಜತೆಗೆ ಅಲ್ಲದೆ, ಬಂಧಿತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಗಲಭೆಯೊಂದಿಗೆ ಹಲ್ಲೆಯ ಪ್ರಕರಣದ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಏನಿದು ಪ್ರಕರಣ: ಬಂಧಿತ ವ್ಯಕ್ತಿ ಡಿ. 13 ರಂದು ಬೈಕ್ ನಲ್ಲಿ ಹಿಂಬಾಲಿಸಿತ್ತ ಬಂದು ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿಯನ್ನು ಪೋಷಕರಿಗೆ ತಿಳಿಸಿದಾಗ, ಬಾಲಕಿಯ ಆಕೆಯ ತಂದೆ ಮತ್ತು ಸ್ನೇಹಿತರು ಇದನ್ನು ಗಮನಿಸಿ, ಮತ್ತೆ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಹಾಗೂ ಕಂಬಕ್ಕೆ ಕಟ್ಟಿ ಹಾಕಿದ್ದು, ಶರ್ಟ್ ಹರಿದಿರುವ ದೃಶ್ಯದ ಫೋಟೋಗಳ ಕ್ಲಿಪ್ಪಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com