Breaking News

ಕ್ರೀಡಾ ಸಾಧಕರಿಂದ ಅರ್ಜಿ ಆಹ್ವಾನ

 

ಕಾರವಾರ:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022- 23 ನೇ ಸಾಲಿನ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢ ಶಾಲಾ ವಿದ್ಯಾರ್ಥಿ (6 ರಿಂದ 10 ನೇ ತರಗತಿ), ಗಳಗೆ ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹ ಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  1.  

ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯವರಾಗಿರಬೇಕು. ಅರ್ಜಿದಾರರು 2021-22 ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢ ಶಾಲೆ (6 ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು, ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ, ಕ್ರೀಡಾ ಸಂಸ್ಥೆಗಳು ಏಪ್ರಿಲ್ 1, 2021 ರಿಂದ ಮಾರ್ಚ್‌ 31, 2022 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳು ಭಾಗವಹಿಸಿರಬೇಕು. ಅಂದರೆ ದಿ: 01-04-2021 ರಿಂದ 31-03-2022 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು, ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರು, ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದವರು ಅರ್ಜಿ ಸಲ್ಲಿಸಬಹುದು,

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು  ಯುವ ಸಬಕರಣ ಮತ್ತು ಕ್ರೀಡ ಇಲಾಖೆ, ಕಾರವಾರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9480886551 ಗೆ ಸಂಪರ್ಕಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com