Breaking News

ಕ್ಷಯ ಮುಕ್ತ ಭಾರತ ಕಾರ್ಯಕ್ರಮ

 

ಉಡುಪಿ:  ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರ ಉಡುಪಿ, ಕ್ಷಯ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಹಾಗೂ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮವು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ, ಸಮೀಕ್ಷಾ ಸ್ಟಿಕರ್ ಳನ್ನು ಬಿಡುಗಡೆ ಮಾಡಿದರು.

ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯ ಶಂಕರ್ ಕ್ಷಯರೋಗ ಕುರಿತು ಜನರಿಗೆ ಮಾಹಿತಿ ನೀಡಿದರು.

  1.  

ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕ ಪ್ರಶಾಂತ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಪಿ.ಡಿ.ಓ ದಯಾನಂದ್ ಬೆನ್ನೂರು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಶ್ಯಾಮಲಾ ಹಾಗೂ ಅರ್ಚನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.

ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ ಕೆ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಎನ್.ಸಿ.ಡಿ ಕಾರ್ಯಕ್ರಮದಡಿ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯ ತಪಾಸಣೆ ನಡೆಸಲಾಯಿತು.

ಈ ಕಾರ್ಯಕ್ರಮದಡಿ ಗ್ರಾಮದ ಎಲ್ಲಾ ಮನೆಗಳಲ್ಲಿ ಸಮೀಕ್ಷೆ ನಡೆಸಿ, ಕ್ಷಯರೋಗದ ಲಕ್ಷಣಗಳಿದ್ದಲ್ಲಿ ಅವರ ಕಫ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿ, ಅಗತ್ಯ ಕ್ರಮ ಕೈಗೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com