Breaking News

ಭೀಕರ ಅಪಘಾತ: ಯಲ್ಲಮ್ಮನ ಗುಡ್ಡಕ್ಕೆ ಹೊರಟವರು ಮಸಣಕ್ಕೆ

 

ಬೆಳಗಾವಿ: ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನವು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದಾರೆ.
ಚಿಂಚನೂರು ವಿಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರ ವಾಹನವೊಂದು ಆಲದ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ 6 ಮಂದಿಯೂ ಸಾವನ್ನಪ್ಪಿದ್ದಾರೆ.

ಮೃತಪಟ್ಟವರು ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು. ಮಧ್ಯರಾತ್ರಿ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳುವಾ ಈ ಘಟನೆ ನಡೆದಿದೆ.

  1.  

ಹನುಮವ್ವ ನಾಕಾಡಿ (25) , ದೀಪಾ (32), ಸವಿತಾ (17 ), ಸುಪ್ರೀತಾ (11), ಮಾರುತಿ (42), ಇಂದಿರವ್ವ (24) ಮೃತಪಟ್ಟವರು. ಕಟಕೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಧನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಮಡಿದವರ ಕುಟುಂಬಗಳಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com