Breaking News

ಕೂರ್ಮಗುಡ್ದ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸೌಲಭ್ಯ: ಎಸಿ ಜಯಲಕ್ಷ್ಮಿ

 

ಕಾರವಾರ: ಇದೇ 6 ರಂದು ನಡೆವ ಕೂರ್ಮಗುಡ್ದ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಸೂಚನೆ ನೀಡಿದರು.

  1.  

ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಜಾತ್ರಾ ಮಹೋತ್ಸವಕ್ಕೆ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಕಡವಾಡದಿಂದ ನರಸಿಂಹಸ್ವಾಮಿ ದೇವರನ್ನು ತೆಗೆದುಕೊಂಡು ಹೋಗಲು ಮೂರು ರೇತಿ ದೋಣಿಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಾರ್ವಜನಿಕರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬೈತುಕೊಲ್ ಮೀನುಗಾರಿಕೆ ಬಂದರಿನಿಂದ ದೋಣಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಜೀವ ರಕ್ಷಕ (ಲೈಫ್ ಜಾಕೇಟ್) ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹೇಳಿ ದರು.

ಸಭೆಯಲ್ಲಿ ತಹಶೀಲ್ದಾರ ನಿಶ್ಚಲ್ ನರೋನಾ, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ತಳೇಕರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಪ್ರತೀಕ್, ಬಂದರು ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್, ಚಿತ್ತಾಕೂಲ ಪಿಎಸ್ಐ ವಿಶ್ವನಾಥ, ಮೀನುಗಾರಿಕಾ ಒಕ್ಕೂಟದ ಅಧ್ಯಕ್ಷ ರಾಜು ತಾಂಡೇಲ ಮತ್ತು ದೇವಸ್ಥಾನ ಸಮಿತಿಯ ಸದಸ್ಯರು ,ಅರ್ಚಕರು ಇದ್ದರು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com