Breaking News

ಎನ್ಐಎ ವಶಕ್ಕೆ ಪಡೆದಿರುವ ರಿಶಾನ್ ತಂದೆ ಸಿದ್ದು, ಡಿಕೆಸಿ, ಖಾದರ್ ಪರಮಾಪ್ತ: ರಘುಪತಿ ಭಟ್

 

ಉಡುಪಿ: ಬ್ರಹ್ಮಾವರ ವಾರಂಬಳ್ಳಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ತಾಜುದ್ದೀನ್ ಎಂಬುವವರ ಪುತ್ರ ರಿಶಾನ್ ನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದೆ. ತಾಜುದ್ದೀನ್ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತ ಮಾತ್ರವಲ್ಲ, ಆತ ಸಿದ್ದರಾಮಯ್ಯ, ಡಿಕೆಶಿ ಹಾಗೂ ಯು.ಟಿ. ಖಾದರ್ ಪರಮಾಪ್ತ. ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಜೊತೆಗೆ ಕಾಂಗ್ರೆಸ್ ಗೆ ನಂಟು ಇದೆ ಎಂಬುವುದಕ್ಕೆ ಇದು ಸಾಕ್ಷಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದರು.

ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎನ್ಐಎ ತನಿಖೆಯಲ್ಲಿ ಒಂದೊಂದೇ ಆತಂಕಕಾರಿ ವಿಚಾರಗಳು ಹೊರಗೆ ಬರುತ್ತಿವೆ. ತನಿಖೆಯನ್ನು ಇನ್ನಷ್ಟು ತೀವ್ರ ಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ. ಕರಾವಳಿಯಲ್ಲಿ ಇಂತಹ ನಿಗೂಢ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ಆಗಬೇಕು. ಹಿಜಾಬ್ ವಿವಾದ ಆದಾಗಲೇ ನಾನು ಇಂತಹ ಆತಂಕ ವ್ಯಕ್ತಪಡಿಸಿದ್ದೆ. ಕರಾವಳಿ ಭಾಗದ ಮೇಲೆ ಎನ್ಐಎ ಹೆಚ್ಚಿನ ನಿಗಾ ಇರಿಸಬೇಕು ಎಂದು ಅವರು ಒತ್ತಾಯಿಸಿದರು.

  1.  

ಎನ್ಐಎ ತಂಡದಿಂದ ಸಿದ್ದರಾಮಯ್ಯ, ಡಿಕೆಶಿ- ಯು ಟಿ ಖಾದರ್ ಪರಮಾಪ್ತ ತಾಜುದ್ದೀನ್ ನ ಮಗನ ಬಂಧನವಾಗಿದೆ. ಕಾಂಗ್ರೆಸ್ ಪಕ್ಷ ಇದಕ್ಕೆ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್ ಪಕ್ಷ ಇದರ ಜವಾಬ್ದಾರಿ ಹೊರಬೇಕು. ಆತನಿಗೆ ಕಾಂಗ್ರೆಸ್ ಪ್ರಮೋಷನ್ ಕೊಟ್ಟು ಬ್ಲಾಕ್ ಅಧ್ಯಕ್ಷನನ್ನಾಗಿ ಮಾಡುತ್ತಾ? ಅಥವಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡ್ತಾರಾ? ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದರು.

ರಿಶಾನ್ ಕುಟುಂಬದ ಹಿನ್ನೆಲೆ ಬಗ್ಗೆ ಸಮಗ್ರ ತನಿಖೆ ಮಾಡಬೇಕು. ರಿಶಾನ್ ತಾಯಿ ಉಡುಪಿ ತೆಂಕನಿಡಿಯೂರಿನ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕಿ. ಆಕೆಯ ವರ್ತನೆ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ನಾಗೇಶ್ ಅವರಿಗೆ ದೂರು ನೀಡಲಾಗಿದೆ. ಆಕೆ ರಾಷ್ಟ್ರೀಯತೆ, ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಿದ್ದರು. ಈ ಕುರಿತ ಆಡಿಯೊಗಳನ್ನು ಸಚಿವರಿಗೆ ನೀಡಲಾಗಿದೆ. ತಾಜುದ್ದೀನ್ ಆರ್ಥಿಕ ಪರಿಸ್ಥಿತಿ ಈ ಹಿಂದೆ ಹದಗೆಟ್ಟಿತ್ತು. ಈಗ ಏಕಾಏಕಿ ಶ್ರೀಮಂತನಾದ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದರು ಎಂದು ಹೇಳಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com