Breaking News

ನಿಜಕ್ಕೂ ಸಿದ್ದು ಕೋಲಾರ ಸೀಟು ಖರೀದಿ ಮಾಡಿದ್ರಾ? ಆಡಿಯೊ ವೈರಲ್ ಬೆನ್ನಲ್ಲೆ ಬಿಜೆಪಿ ಟ್ವಿಟ್

 

ಬೆಂಗಳೂರು; ‘ಕೊನೆ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇಷ್ಟು ದಿನ ಹುಡುಕಾಟ ನಡೆಸಿ ಸೀಟು ಖರೀದಿಸಿರುವ ಸಂಗತಿ ನಿಜಕ್ಕೂ ನಾಚಿಕೆಗೇಡು’ ಎಂದು ಬಿಜೆಪಿ ಟ್ವಿಟ್ ಮೂಲಕ ಲೇವಡಿ ಮಾಡಿದೆ.

  1.  

ಸಿದ್ದರಾಮಯ್ಯ ಅವರಿಗಾಗಿ ಜೆಡಿಎಸ್‌ ಉಚ್ಚಾಟಿತ ಶಾಸಕ ಶ್ರೀನಿವಾಸ ಗೌಡ ಅವರು ಕ್ಷೇತ್ರ ಬಿಟ್ಟು ಕೊಡುವುದು, ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀನಿವಾಸಗೌಡ ಅವರು ತಮ್ಮ ಆಪ್ತರ ಜತೆಗೆ ನಡೆಸಿದ ಸಂಭಾಷಣೆಯ ಆಡಿಯೊ ವೈರಲ್ ಆಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಆಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ, ‘ಸೀಟು ಖರೀದಿಗೆ ಶ್ರೀನಿವಾಸ ಗೌಡರ ಜತೆ 17 ಕೋಟಿ ರೂಪಾಯಿಗೆ ಮಾಡಿಕೊಂಡಿರುವ ಡೀಲ್‌ ಪ್ರಜಾಪ್ರಭುತ್ವದ ಪಾಲಿನ ದುರಂತ’ ಎಂದು ಆರೋಪಿಸಿದೆ.

‘ಕಾಂಗ್ರೆಸ್ ಅಧ್ಯಕ್ಷರು ಟಿಕೆಟ್‌ ಮಾರಾಟಕ್ಕಿಟ್ಟರೆ, ವಿರೋಧ ಪಕ್ಷದ ನಾಯಕರು ಸೀಟನ್ನೇ ಖರೀದಿ ಮಾಡುವವರು. ಚುನಾವಣಾ ರಾಜಕಾರಣದಲ್ಲಿ ಹಿಂದೆಂದೂ ಕಂಡು ಕೇಳರಿಯದ ಅಕ್ರಮದ ಯೋಜನೆಗಳನ್ನು ಕಾಂಗ್ರೆಸ್ ಚಾಲನೆಗೆ ತಂದಿದೆ’ ಎಂದು ಬಿಜೆಪಿ ತೀಷ್ಣವಾಗಿ ಟೀಕೆ ಮಾಡಿದೆ.

”ಹಲವು ಕೆಟ್ಟ ಪರಂಪರೆ ಹುಟ್ಟು ಹಾಕಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಕೋಲಾರ ಸೀಟು ಖರೀದಿ ಪ್ರಹಸನ ಮತ್ತೊಂದು ಗರಿ. ಅಸ್ತಿತ್ವಕ್ಕಾಗಿ ಮಾಡುವ ಕೊನೆ ಹೋರಾಟಗಳಲ್ಲಿ ಎಲ್ಲಾ ನೀತಿಗಳನ್ನೂ ಬದಿಗೆ ಇಡಲಾಗುತ್ತಿದೆ. ಆದರೆ ಈ ಪ್ರಮಾಣದಲ್ಲಿ ಆಗುತ್ತಿರುವ ಬೆಳವಣಿಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಮಾರಕ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com