Breaking News

ತಂಬಾಕು ಮಾರಾಟದ ಅಂಗಡಿಗಳ ಮೇಲೆ ದಾಳಿ: 42 ಪ್ರಕರಣ ದಾಖಲು

 

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೊರೆಂಟ್‌ಗಳ ಮೇಲೆ ದಾಳಿ ನಡೆಸಿ 42 ಪ್ರಕರಣಗಳನ್ನು ದಾಖಲು ಮಾಡಲಾಯಿತು.

  1.  

ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ನಗರಸಭೆಯ ಸುರೇಂದ್ರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿ ಇದ್ದರು.

  1.  

Leave a Reply

Your email address will not be published. Required fields are marked *