Breaking News

ಮಂಗಳೂರಿನಲ್ಲಿ  22 ರಂದು ಪ್ರಜಾಧ್ವನಿ ಯಾತ್ರೆ:ಹರೀಶ್ ಕುಮಾರ್

 

ಕರಾವಳಿ ಡೈಲಿನ್ಯೂಸ್

ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆ ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು, ನಗರದ ಕರಾವಳಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ  ಎಂದು ಜಿಲ್ಲಾ ಕಾಂಗ್ರೆಸ್  ಘಟಕದ ಅಧ್ಯಕ್ಷ ಹರೀಶ್ ಕುಮಾರ್  ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

“ರಾಜ್ಯ ಬಿಜೆಪಿ ಸರಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ, ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಂಡಿದೆ. ಸರಕಾರದ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳ್ಳುತ್ತಿಲ್ಲ. ಸಂಪೂರ್ಣ ನಿಂತು ಹೋಗಿದೆ. ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ. ಇದನ್ನು ಖಂಡಿಸಲು ಯಾತ್ರೆ ನಡೆಸಲಾಗುತ್ತಿದೆ” ಎಂದರು.

  1.  

“ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ. ಜಿಎಸ್ಟಿ, ಟ್ಯಾಕ್ಸ್ ನಿಂದ ಜನರು ರೋಸಿ ಹೋಗಿದ್ದಾರೆ. ಅವರ ಧ್ವನಿಯಾಗಿ ಸರಕಾರದ ವೈಫಲ್ಯವನ್ನು ಖಂಡಿಸಲು ಪ್ರಜಾಧ್ವನಿ ಯಾತ್ರೆಯನ್ನು  ಪಕ್ಷ ಹಮ್ಮಿಕೊಂಡಿದೆ. ಇದೇ ಸಂದರ್ಭದಲ್ಲಿ ಅಶೋಕ್ ರೈ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ”  ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರೋಜಿ ಜಾನ್, ಎಂ.ಬಿ. ಪಾಟೀಲ್, ಕೆಪಿಸಿಸಿ ಉಸ್ತುವಾರಿ ಸಲೀಂ ಮುಹಮ್ಮದ್, ಮಧು ಬಂಗಾರಪ್ಪ, ಧ್ರುವನಾರಾಯಣ್, ಎಚ್. ಕೆ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಡಿಸೋಜ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com