Breaking News

ಕಾಂತಾರ ಸಿನಿಮಾದ ದೈವದ ಗೆಟಪ್ ನಲ್ಲಿ ಗ್ರಾ.ಪಂ. ಅಧ್ಯಕ್ಷೆ ಪುಷ್ಪಲತಾ

 

ಕರಾವಳಿ ಡೈಲಿನ್ಯೂಸ್

ಕುಮಟಾ: ತಾಲ್ಲೂಕಿನ ಮಣಕಿ ಹೊಳಪು ಕಾರ್ಯಕ್ರಮದಲ್ಲಿ ಅಂಕೋಲಾ ತಾಲ್ಲೂಕಿನ ವಂದಿಗೆ ಗಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ  ನಾಯಕ್ ಅವರು ಕಾಂತಾರ ಸಿನಿಮಾದ ಪಂಜುರ್ಲಿ ದೈವದ ವೇಷವನ್ನು ಧರಿಸಿ ವಿಶಿಷ್ಟವಾದ ಪ್ರದರ್ಶನ ನೀಡುವ ಮೂಲಕ ಉತ್ತರ ಕನ್ನಡ ಜಿಲ್ಲಾ ಮಟ್ಟದ 2ನೇ ಸ್ಥಾನ ಗಳಿಸಿದ್ದಾರೆ.

  1.  

   

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಅವರ ವಿಶಿಷ್ಟ ವೇಷಕ್ಕೆ ಕಾರ್ಯಕ್ರಮದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಕೋಟ ಹಾಗೂ ವಿಧಾನ ಪರಿಷತ್ ಸದಸ್ಯ ಗಣಪತಿ  ಉಳ್ವೇಕರ್ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸೇರಿದಂತೆ ಹಲವು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ವಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಅವರು ಉತ್ತರ ಕನ್ನಡ ಜಿಲ್ಲೆಯ ನಿವೃತ್ತ ಜಿಲ್ಲಾ ಓಂಬಡ್ಸಮನ್  ಆರ್.ಜಿ. ನಾಯಕ್ ಅವರ ಪತ್ನಿ.    

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com