Breaking News

ವರ್ಗಾವಣೆ ಪರ್ವ ಜೋರು : 6 ಐಎಎಸ್, 4 ಐಪಿಎಸ್ ಅಧಿಕಾರಿಗಳ ಎತ್ತಂಗಡಿ

 

ಬೆಂಗಳೂರು: ರಾಜ್ಯ ಸರಕಾರವು ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕಿ ಎಸ್. ಪೂವಿತಾ ಅವರನ್ನು ಚಾಮರಾಜನಗರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಚಾಮರಾಜನಗರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಅವರನ್ನು ಮೈಸೂರು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಅವರನ್ನು ಹಾಸನ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಬಳ್ಳಾರಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಿಂಗಮೂರ್ತಿ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರಕಾರದ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಸದಸ್ಯ ಬಿ.ಸದಾಶಿವ ಪ್ರಭು ಅವರನ್ನು ವಿಜಯನಗರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

  1.  

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉಪ ಆಯುಕ್ತ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

4 ಮಂದಿ ಐಪಿಎಸ್ ಅಧಿಕಾರಿಗಳ ವರ್ಗ: ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ)ಯ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ಋಶಿಕೇಷ್ ಭಾಗವಾನ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಾತೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com