Breaking News

ಮತ್ಸ್ಯ ಸಂಪದ ಯೋಜನೆ: 6000 ಕೋಟಿ ಹೂಡಿಕೆ ಪ್ರಸ್ತಾವ: ಸಚಿವ ಸುನೀಲ್

 

ಬೆಂಗಳೂರು: ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಸಮತೋಲನ ಬಜೆಟ್. ಮಧ್ಯಮ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಆದ್ಯತೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಆಯವ್ಯಯ ರೂಪಿಸಿದೆ ಎಂದು ಸಚಿವ ವಿ ಸುನಿಲ್ ಕುಮಾರ್ ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಮೃತ ಕಾಲದಲ್ಲಿ ಏಳು ಆದ್ಯತಾ ವಲಯಗಳಿಗೆ ಅನುಗುಣವಾಗಿ ಕೇಂದ್ರ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗಿದೆ. ಹಸಿರು ಕ್ರಾಂತಿಗಾಗಿ‌ ಪಿಎಂ ಪ್ರಣಾಮ್ ಯೋಜನೆ ರೂಪಿಸಲಾಗಿದೆ.  ಮತ್ಸ್ಯ ಸಂಪದ ಯೋಜನೆಯಲ್ಲಿ 6000 ಕೋಟಿ ರೂ. ಹೂಡಿಕೆ ಪ್ರಸ್ತಾಪಿಸಿರುವುದು ರಾಷ್ಟ್ರದ ಕರಾವಳಿ ಭಾಗದ ಅಭಿವೃದ್ಧಿಯಲ್ಲಿ‌ ಮಹತ್ವದ ಪಾತ್ರ ವಹಿಸುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ಭದ್ರ ಮೇಲ್ದಂಡೆ ಯೋಜನೆಗಾಗಿ ಬಜೆಟ್ ನಲ್ಲಿ 5200 ಕೋಟಿ ರೂ. ನಿಗದಿ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟಿದ್ದಾರೆ.

  1.  

ಹಸಿರು ಇಂಧನ ಕ್ಷೇತ್ರವನ್ನು ಆದ್ಯತಾ ವಲಯವಾಗಿ ಗುರುತಿಸಲಾಗಿದ್ದು, 2030 ರ ವೇಳೆಗೆ ಐದು ಎಂಎಂಟಿ ಹಸಿರು ಹೈಡ್ರೋಜನ್ ಉತ್ಪಾದನಾ ಗುರಿ ನಿಗದಿ ಮಾಡಲಾಗಿದ್ದು, 35000 ಕೋಟಿ ರೂ. ಹೂಡಿಕೆಗೆ ನಿರ್ಧರಿಸಿರುವುದು ಸ್ವಾಗತಾರ್ಹ. ಇದು ರಾಜ್ಯಗಳ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಬಂಡವಾಳ ಹೂಡಿಕೆ ಮಿತಿಯನ್ನು 10 ಲಕ್ಷ ಕೋಟಿಗೆ ಹೆಚ್ಚಳ‌ ಮಾಡಲಾಗಿದ್ದು, ಇದು ಜಿಡಿಪಿಯ ಶೇ.3.3 ರಷ್ಟಾಗುತ್ತದೆ. ಇದು ಭಾರತದ ಬದಲಾದ ಆರ್ಥಿಕ ಶಕ್ತಿಗೆ ನಿದರ್ಶನ ಎಂದು ಹೇಳಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com