Breaking News

ಸೌದಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು

 

ಮಂಗಳೂರು: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ  ಘಟನೆ ನಡೆದಿದೆ.

ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಝ್ವಾನ್ (23) ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗು ಬಾಂಗ್ಲಾದೇಶದ ಇನ್ನೋರ್ವ ಪ್ರಜೆ ನಾಸೀರ್ ಎಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  1.  

ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಜ್ವಾನ್ ಅವರು  4 ತಿಂಗಳ ಹಿಂದಷ್ಟೇ ಉದ್ಯೋಗಕ್ಕೆ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿ ನಾಲ್ಕು ಮಂದಿ ಮಕ್ಕಳ ಪೈಕಿ ಮೂವರು ಪುತ್ರಿಯರು ಹಾಗೂ ಏಕೈಕ ಪುತ್ರ.

ಸೌದಿ ಅರೇಬಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು ರಾತ್ರಿ ವೇಳೆ ಕೆಲಸಕ್ಕೆ ತೆರಳುತ್ತಿರುವಾಗ ಒಂಟೆ ರಸ್ತೆಗೆ ಅಡ್ಡ ಬಂದ ಪರಿಣಾಮ ವಾಹನ ನಿಯಂತ್ರಿಸಲಾಗದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತ ಶರೀರಗಳನ್ನು ಅಲ್ಲಿನ ಅಲ್-ಹಸಾ ಪ್ರದೇಶದ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ಶರೀರಗಳನ್ನು ಊರಿಗೆ ಕರೆತರವ ಬಗ್ಗೆ ಮಂಗಳೂರಿನ ಸಂಘಟನೆಗಳ ಪ್ರಮುಖರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com