Breaking News

ರಾಜ್ಯದ ರೈತರಿಗೆ 16,500 ಕೋಟಿ ಸಾಲ ವಿತರಣೆ: ಸಚಿವ ಸೋಮಶೇಖರ್

 

 ಮಂಗಳೂರು: ರಾಜ್ಯ ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಘಗಳ ಮೂಲಕ 22 ಲಕ್ಷ ರೈತರಿಗೆ ಕಳೆದ ಜನವರಿ ಅಂತ್ಯದ ವೇಳೆಗೆ 16,500 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು  ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಪ್ರಗತಿಪರಿಶೀಲನಾ ಸಭೆ ನಡೆಸಿ  ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು  ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ನಲ್ಲಿ ಪ್ರಕಟಿಸಿದಂತೆ  33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು.  ಮುಂದಿನ ಮಾರ್ಚ್ ಅಂತ್ಯದ ವೇಳೆಗೆ  ನಿಗದಿತ ಗುರಿ ಸಾಧಿಸಲಾಗುವುದು ಎಂದರು.

ಈಗಾಗಲೇ ರಾಜ್ಯದ 14  ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ.  ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್ಗಳಿಗೆ ಗುರಿ ನಿಗದಿಪಡಿಸಲಾಗಿದೆ. ಅರ್ಹ ರೈತರಿಗೆ ಸಾಲ ವಿತರಣೆಯಲ್ಲಿ ಯಾವುದೇ ತಾರತಮ್ಯ  ಮಾಡದಂತೆ ಎಚ್ಚರ ವಹಿಸಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ವ್ಯಾಪ್ತಿಯಲ್ಲಿ 2,024 ಕೋಟಿ ರೂ. ಸಾಲ ವಿತರಿಸಲಾಗಿದೆ. 1.74 ಲಕ್ಷ ರೈತರಿಗೆ 2, 300 ಕೋಟಿ ರೂ. ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ್ತು. ಮಾರ್ಚ್ ಅಂತ್ಯದ ವೇಳೆಗೆ ನಿಗದಿತ ಗುರಿ ತಲುಪುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಸಚಿವ ಸೋಮಶೇಖರ್ ಹೇಳಿದರು.

  1.  

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಶ್ಲಾಘಿಸಿದ ಅವರು, ರಾಜ್ಯದ 6 ಸಾವಿರಕ್ಕೂ ಅಧಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ಗಳಿಗೆ 191 ಕೋಟಿ ರೂ. ವೆಚ್ಚದಲ್ಲಿ ಏಕರೂಪದ ತಂತ್ರಾಂಶ ಅಳವಡಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಯಶಸ್ವಿನಿ ಆರೋಗ್ಯ ಯೋಜನೆ ಜಾರಿಯಾಗಿದ್ದು, ಫೆಬ್ರುವರಿ ಅಂತ್ಯದವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ರೈತರ ಸಾಲಮನ್ನಾ ಸಂಬಂಧಿಸಿ  ಸರಕಾರದಿಂದ  ಸಹಕಾರಿ ಬ್ಯಾಂಕ್ಗಳಿಗೆ 157 ಕೋಟಿ ರೂ. ಪಾವತಿಗೆ ಬಾಕಿ ಇದೆ. ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದ್ದು ಶೀಘ್ರ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದರು.

ದೇಶದಾದ್ಯಂತ ಸಹಕಾರಿ ಸಂಘಗಳಿಗೆ ಏಕರೂಪದ  ನಿಯಮಾವಳಿ ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ. ಆಂಗ್ಲ ಭಾಷೆಯಲ್ಲಿರುವ ನಿಯಾಮಾವಳಿಯನ್ನು  ಕನ್ನಡಕ್ಕೆ ಭಾಷಾಂತಾರ ಮಾಡಲಾಗಿದೆ. ಮಾದರಿ ಬೈಲಾ ಶೀಘ್ರ ಅಳವಡಿಕೆಯಾಗಲಿದೆ ಎಂದು ವಿವರಿಸಿದರು.

ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ಬ್ಯಾಂಕ್ ವತಿಯಿಂದ ಬ್ಯಾಂಕಿನ ಅಧ್ಯಕ್ಷ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್  ಸನ್ಮಾನಿಸಿದರು.

ಶಾಸಕ ಡಿ.ವೇದವ್ಯಾಸ ಕಾಮತ್, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ , ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ  ಭಾಸ್ಕರ್ ಎಸ್. ಕೋಟ್ಯಾನ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್,  ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಗೋಪಾಲಕೃಷ್ಣ  ಭಟ್, ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಜಿ.ಉಮೇಶ್,ಸಹಾಯಕ ನಿಬಂಧಕ ಸುಧೀರ್ ಕುಮಾರ್ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com