Breaking News

ದಕ್ಷಿಣ ಕನ್ನಡದವರು ಕಟ್ಟಿದ ಬ್ಯಾಂಕ್ ನುಂಗಿದ ಗುಜರಾತಿಗರು: ಸಿದ್ದರಾಮಯ್ಯ ಟ್ವಿಟ್

 

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯವರು ಬೆಳೆಸಿದ ಬ್ಯಾಂಕ್ ಗಳನ್ನು ಗುಜರಾತಿಗರು ನುಂಗಿ ನೀರು ಕುಡಿದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ಮೂಲಕ ಕೇಂದ್ರ ಸಚಿವ ಅಮಿತ್ ಶಾ ಅವರ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  1.  

ಶನಿವಾರ ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಮಿತ್ ಶಾ ಅವರು ಗುಜರಾತ್ ಜನರು ಅಡಿಕೆ ತಿಂದರೆ, ದಕ್ಷಿಣ ಕನ್ನಡದ ಜನರು ಅಡಿಕೆ ಬೆಳೆಯುತ್ತಾರೆ ಎಂಬ ಹೇಳಿಕೆ ನೀಡಿದ್ದರು.

ದಕ್ಷಿಣ ಕನ್ನಡದವರು ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ಗಳನ್ನು ಕಟ್ಟಿ ಬೆಳೆಸಿದರು. ಗುಜರಾತಿನವರು ಬ್ಯಾಂಕುಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು. ಎಂದು ಹೇಳಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com