Breaking News

ಗ್ರಾಮ ಪಂಚಾಯಿತಿ ಸಶಕ್ತಿಗೆ 780 ಕೋಟಿ ಅನುದಾನ

 

ಬೆಂಗಳೂರು: ರಾಜ್ಯದ ಆರ್ಥಿಕ ಉತ್ತೇಜನಕ್ಕೆ ಸರ್ಕಾರವು 61,234 ಕೋಟಿ ರೂ. ನೆರವು ನೀಡಿದೆ. 2023-24 ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ₹22 ರಿಂದ 60 ಲಕ್ಷ  ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ  ಘೋಷಣೆ ಮಾಡಿದ್ದಾರೆ.

  1.  

ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮೂಲಕ  ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿ ವಿಶೇಷ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com