Breaking News

ಜನರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್: ಯಶ್ ಪಾಲ್ ಸುವರ್ಣ

 

ಉಡುಪಿ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುವ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದಾರೆ. ಜನಸಾಮಾನ್ಯರ ನಿರೀಕ್ಷೆಗೆ ಸ್ಪಂದಿಸುವ ಯೋಜನೆಗಳು ಬಜೆಟ್ ನಲ್ಲಿ ಇವೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

  1.  

ರೈತರಿಗೆ ಶೂನ್ಯ ಬಡ್ಡಿದರದ ಸಾಲ ಯೋಜನೆ 5 ಲಕ್ಷಕ್ಕೆ ಏರಿಕೆ, ಮೀನುಗಾರಿಕೆ ನಾಡದೋಣಿಗಳಿಗೆ ಪೆಟ್ರೋಲ್ ಎಂಜಿನ್ ಅಳವಡಿಕೆಗೆ 50 ಸಾವಿರ ಸಹಾಯಧನ, ಬೈಂದೂರಿನಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಅನುದಾನ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್, ಮಹಿಳಾ ಸ್ವ ಸಹಾಯ ಸಂಘಗಳ ಶೂನ್ಯ ಬಡ್ಡಿದರಲ್ಲಿ ಸಾಲ ಯೋಜನೆಗೆ 1,800 ಕೋಟಿ ಮೀಸಲು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ, ಸಾಗರ ಮಾಲಾ ಯೋಜನೆ ಅಡಿಯಲ್ಲಿ 12 ಕಿರು ಬಂದರು ಅಭಿವೃದ್ದಿಗೆ ಚಾಲನೆ ಸೇರಿದಂತೆ ಹಲವು ಯೋಜನೆಗಳು ಬಜೆಟ್ ನಲ್ಲಿ

ಇವೆ ಎಂದು ಹೇಳಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com