Breaking News

ಮಗುವಿಗೆ ಎದೆಹಾಲು ಉಣಿಸುವಾಗಲೇ ಕುಸಿದು ಬಿದ್ದು ಮಹಿಳೆ ಸಾವು

c

 

ಉಡುಪಿ (ಕೋಟ): ಮಗುವಿಗೆ ಹಾಲು ಕುಡಿಸುತ್ತಿರುವ ವೇಳೆಯಲ್ಲಿಯೇ ಮಹಿಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  1.  

ಮೃತ ಮಹಿಳೆ ಗುಣವತಿ (39) ಎಂದು ಗುರುತಿಸಲಾಗಿದೆ. ಉಡುಪಿ ತಾಯಿ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 21 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ವಾರದ ಹಿಂದೆ ಗುಣವತಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಶನಿವಾರ ಬೆಳಿಗ್ಗೆ ಮಗುವಿಗೆ ಎದೆಹಾಲು ಉಣಿಸುತ್ತಿದ್ದ ವೇಳೆ ನಿತ್ರಾಣಗೊಂಡು ಕುಸಿದು ಬಿದ್ದಿದ್ದರು. ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com