Breaking News

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ: ಡಿಕೆಸಿ

 

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ರಾಜ್ಯದ ಜನರಿಗೆ ಮತ್ತೊಂದು ಮಹತ್ವದ ಕೊಡುಗೆ ಘೋಷಣೆ ಮಾಡಿದೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಬಿಪಿಎಲ್ ಕಾರ್ಡ್ ದಾರರ ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದರು. ಇದು ಕಾಂಗ್ರೆಸ್ ನ 3ನೇ ಗ್ಯಾರಂಟಿ ಎಂದು ಹೇಳಿದರು.

  1.  

ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ ಎಂದರು.

ಈಗಾಗಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯ ಭಾಗವಾಗಿ ಎರಡು ಮಹತ್ವದ ಯೋಜನೆ ಘೋಷಿಸಿದ್ದು, 200 ಯುನಿಟ್ ಉಚಿತ ವಿದ್ಯುತ್ ಹಾಗು ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಸಹಾಯಧನ ಘೋಷಿಸಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಲವರು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com