Breaking News

ದ.ಕ. ಜಿಲ್ಲೆಯ ಗಡಿ ಪ್ರದೇಶದ ಚೆಕ್ ಪೋಸ್ಟ್ ಗಳಿಗೆ ಎಸ್ಪಿ ಡಾ. ವಿಕ್ರಮ ಭೇಟಿ

 

ಮಂಗಳೂರು: ವಿಧಾನಸಭೆ ಚುನಾವಣೆ ಇನ್ನೇನು ಕೆಲ ದಿನಗಳಲ್ಲಿ ಘೋಷಣೆ ಆಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಅವರು ಸ್ಥಳೀಯ ಪೊಲೀಸ್ ಅಧಿಕಾರಿಗಳ ಜತೆಗೆ ಅಂತರ ರಾಜ್ಯ ಗಡಿಯಲ್ಲಿ ಇರುವ  ಮುರೂರು, ಮಂಡೆಕೋಲು, ಕೊಲ್ಚಾರು, ನಾರ್ಕೋಡು,, ಕನ್ಯಾಣ, ಸಾರಡ್ಕ, ಸಾಕೇತುರು, ಆನೇಕಲ್ ಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗೆ  ಚುನಾವಣೆ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದ ಅವರು, ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡುವಂತೆ ಕಟ್ಟುನಿಟ್ಟಿನ ಸೂಚಿಸಿದರು.

  1.  

ಸೂಕ್ಷ್ಮ ಪ್ರದೇಶಗಳಾದ ಗುತ್ತಿಗಾರು ಹಾಗೂ ಜಾಲಸೂರುಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಭೆ ನಡೆಸಿದರು.  ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಮಾಡಿದರು. ಗುತ್ತಿಗಾರುವಿನಲ್ಲಿ ರೌಡಿಶೀಟರ್ ಗೆ ಎಚ್ಚರಿಕೆ ನೀಡಿದರು. ಸುಳ್ಯ ಹಾಗೂ ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಮತಗಟ್ಟೆ ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಕೇರಳ ರಾಜ್ಯದ ಗಡಿಯಲ್ಲಿರುವ ಆಡೂರ್ ಪೊಲೀಸ್ ಠಾಣೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಕೇರಳ ರಾಜ್ಯದ ಆಡೂರು ಪೊಲೀಸ್ ಠಾಣೆಯ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಚೆಕ್ಪೋಸ್ಟ್ ಗಳಲ್ಲಿ ಪರಿಣಾಮ ಕಾರಿಯಾಗಿ ಕರ್ತವ್ಯ ನಿರ್ವಹಿಸುವಲ್ಲಿ ಸಹಕಾರ ನೀಡುವಂತೆ ಚರ್ಚೆ ನಡೆಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com