Breaking News

ಗುಜರಿ ಅಂಗಡಿಗೆ ಬೆಂಕಿ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

 

ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

  1.  

ಪ್ಲಾಸ್ಟಿಕ್ ಜತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com