Breaking News

ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಜಸ್ಟ್ ವಿಸಿಟಿಂಗ್ ಕಾರ್ಡ್: ಬೊಮ್ಮಾಯಿ ಲೇವಡಿ

 

ಮಂಗಳೂರು: ಕಾಂಗ್ರೆಸ್  ಗ್ಯಾರಂಟಿ ಕಾರ್ಡ್ ಯಾವುದೇ ಬೆಲೆಯೇ ಇಲ್ಲ. ಗ್ಯಾರಂಟಿ ಕಾರ್ಡ್ ವಿಸಿಟಿಂಗ್ ಕಾರ್ಡ್ ಗೆ ಸಮ. ಕಾಂಗ್ರೆಸ್ ಬಗ್ಗೆ ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರ ಮಾತಿಗೆ ಗ್ಯಾರಂಟಿ ಇಲದೇ ಇರುವುದರಿಂದ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಮಂಗಳೂರಿನ ಹೆಲಿಪ್ಯಾಡ್ ನಲ್ಲಿ ಅವರು ಲೇವಡಿ ಮಾಡಿದರು.

ಸೋಮಣ್ಣ- ಯಡಿಯೂರಪ್ಪ ವೈಮನಸ್ಸಿನ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ. ಅವರು ನವದೆಹಲಿಗೆ ವೈಯಕ್ತಿಕ ಕಾರಣದಿಂದಷ್ಟೆ ಹೋಗಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವನ್ನು ಅವರು ಹೊಂದಿಲ್ಲ. ಯಡಿಯೂರಪ್ಪ ಅವರು ಎಲ್ಲರಿಗಿಂತ ಎತ್ತರದ ಲೀಡರ್ ಎಂದು ಹೇಳಿದರು.

  1.  

ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಳ್ಗಿಚ್ಚು ಉಂಟಾಗುತ್ತಿರುವ ಕುರಿತು ಮಾತನಾಡಿ, ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀಳುತ್ತದೆ. ಬೆಂಕಿ ನಂದಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಡಿಸಿಗಳ ಜೊತೆ ಸಭೆ ಮಾಡಿದ್ದೇನೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ‌ ನಂದಿಸಲು ಹೆಲಿಕಾಪ್ಟರ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.

ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ಕಾಂಗ್ರೆಸ್ ವಿರೋಧದ ಕುರಿತು ಮಾತನಾಡಿ, ಕಾಂಗ್ರೆಸ್  ಎಲ್ಲದರಲ್ಲೂ ರಾಜಕಾರಣ ಮಾಡುತ್ತದೆ.  ಕಾಂಗ್ರೆಸ್ ಸರ್ಕಾರ ಇದ್ದಾಗ ಟೋಲ್ ಆಗಿಲ್ವಾ? ಕೆಟ್ಟ ಪರಂಪರೆ ಕಾಂಗ್ರೆಸ್ ನದ್ದು.‌ ಸಮಸ್ಯೆ ಇದ್ದರೆ ಕೂತು ಬಗೆಹರಿಸಿಕೊಳ್ಳಬಹುದು. ಕಾಂಗ್ರೆಸ್ ಸಭ್ಯತೆಯ ದಿವಾಳಿತನ ತೋರಿಸಿದೆ ಎಂದು ಟೀಕಿಸಿದರು.

ಕುಡಿಯುವ ನೀರಿನ ವಿಚಾರದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ. ನೀರಿಗಾಗಿ ಕೆಲ ಕಡೆ ತುಂಬಾ ಸಮಸ್ಯೆಗಳಿವೆ.‌ ಕೆಲ ಭಾಗದಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿದೆ. ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ. ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡೋದು ಅವರ ಪಕ್ಷಕ್ಕೆ ಬಿಟ್ಟಿದ್ದು. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರ  ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದರು.‌

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com