Breaking News

ನಗರ ಕಸ‌ ವಿಲೇವಾರಿಗೆ ವಾರ್ ರೂಂ: ಶಾಸಕ ಕಾಮತ್ ವಿನೂತನ ಪ್ರಯತ್ನ

 

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ನನ್ನ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದೇನೆ. ಸಾರ್ವಜನಿಕರು ತಮ್ಮ ಮನೆ, ಫ್ಲಾಟ್ ಅಥವಾ ರಸ್ತೆ ಬದಿಯಲ್ಲಿ ಕಸದ ರಾಶಿಗಳಿದ್ದರೆ  ವಾರ್ ರೂಂ ಸಂಖ್ಯೆಗಳಿಗೆ ಕರೆ ಮಾಡಿದರೆ ಕಸ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲವು ದಿನಗಳಿಂದ ಕಸ ಸಂಗ್ರಹಣೆ ಕಾರ್ಮಿಕರು ಮುಷ್ಕರ ನಡೆಸಿರುವ ಕಾರಣ ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಮಾತುಕತೆ ಮೂಲಕ ಮನವೊಲಿಸುವ ಪ್ರಯತ್ನ ಮಾಡಲಾಗಿದೆ. ಹಲವು ಪ್ರಯತ್ನ ಮಾಡಿದರೂ ಅವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇಡೀ ರಾಜ್ಯದಾದ್ಯಂತ ಕಾರ್ಮಿಕರು ಪ್ರತಿಭಟನೆ ಕೈಗೊಂಡಿರುವ ಕಾರಣ ರಾಜ್ಯದಲ್ಲಿ ಮುಷ್ಕರ ಕೈಬಿಟ್ಟ ನಂತರವೇ ಕೆಲಸಕ್ಕೆ ಹಾಜರಾತ್ತೇವೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಹಾಗಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾರಂಭದಲ್ಲಿ ಕಸ ಸಾಗಣೆ ವಾಹನ ಚಾಲಕರನ್ನು ತಾತ್ಕಾಲಿಕ ಆಧಾರದಲ್ಲಿ ನೇಮಿಸಿ ಕೆಲಸ‌ ಪ್ರಾರಂಭಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಸಾಕಷ್ಟು ವಾಹನ ಚಾಲಕರನ್ನು ಜೋಡಿಸಿಕೊಳ್ಳುವುದು ಕಷ್ಟ ಸಾಧ್ಯವಾಗಿತ್ತು. ಆದರೂ, 75 ರಿಂದ 80 ಚಾಲಕರನ್ನು ಜೋಡಿಸುವ ಕೆಲಸ ಮಾಡಲಾಗಿದೆ. ಇನ್ನೂ ಹೆಚ್ಚುವರಿ 30 ರಿಂದ 40 ವಾಹನ ಚಾಲಕರ ಅಗತ್ಯವಿದ್ದು, ಕೆಲಸ ಮಾಡಲು ಇಚ್ಛೆಯುಳ್ಳ ವಾಹನ ಚಾಲಕರು ನನ್ನ ಕಚೇರಿಯನ್ನು ಸಂಪರ್ಕಿಸುವಂತೆ  ತಿಳಿಸಿದ್ದಾರೆ.

  1.  

ವಾರ್ಡ್ ಗಳ ಆಧಾರದಲ್ಲಿ ವಾಹನ ಚಾಲಕನ್ನು ನೇಮಿಸಲಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ಸೂಪರ್ ವೈಸರ್ ಗಳ ಮೊಬೈಲ್ ಸಂಖ್ಯೆ ಕೂಡ ಈ ಮೂಲಕ ನೀಡಲಾಗಿದೆ. ಈಗ ಕೆಲಸಕ್ಕೆ ಜೋಡಿಸಿಕೊಂಡಿರುವ ಕಾರ್ಮಿಕರು ಕೂಲಿ ಕೆಲಸ ಕಾರ್ಮಿಕರಾಗಿರುವ ಕಾರಣ ವಾರ್ಡ್ ಗಳ ಪರಿಚಯವಿಲ್ಲ. ಹಾಗಾಗಿ ಕೆಲವೆಡೆಗಳಲ್ಲಿ ಕಸ ಸಂಗ್ರಹಣೆಯಲ್ಲಿ ತೊಡಕಾಗಿದೆ. ಅದೆಲ್ಲವನ್ನೂ ನಿವಾರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಾರ್ಡ್ ಗಳ ಸಂಖ್ಯೆ, ಸೂಪರ್ ವೈಸರ್, ಡ್ರೈವರ್ ಗಳು ಹಾಗೂ ಸ್ಥಳೀಯ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ನೀಡಲಾಗಿದೆ. ಕಸ ವಿಲೇವಾರಿ ಸಮಸ್ಯೆ ತಲೆದೂರಿದಲ್ಲಿ ನಮ್ಮ ವಾರ್ ರೂಂ ಸಂಪರ್ಕಿಸಿದರೆ ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಜನತೆಗೆ ಆಗಿರುವ ಸಮಸ್ಯೆಗೆ ವಿಷಾದ ವ್ಯಕ್ತಪಡಿಸುತ್ತಾ, ಇನ್ನು 3-4 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಮೂಲಕ ತ್ಯಾಜ್ಯ ವಿಲೇವಾರಿಯ ಸಮಸ್ಯೆ ಸರಿಪಡಿಸಲಾಗುವುದು ಎಂದು ಹೇಳಿದರು.

ವಾರ್ ರೂಂ ಸಂಖ್ಯೆ: 8904078297, 8197270222,  ವಾರ್ ರೂಂ ಸಮಯ: ಬೆಳಗ್ಗೆ 9:00 ರಿಂದ ಸಂಜೆ 5 ಗಂಟೆಯವರಿಗೆ ಸಂಪರ್ಕ ಮಾಡಬಹುದು. 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com