Breaking News

26 ರಂದು ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯ ನಾಮಕರಣ

 

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭವು ಇದೇ 26 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ನಾಮಫಲಕ ಉದ್ಘಾಟಿಸಲಿದ್ದಾರೆ. ಸಚಿವ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು.

  1.  

ಸಚಿವರಾದ ಎಸ್. ಅಂಗಾರ,  ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭೆ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ, ಶಾಸಕ ಯು.ಟಿ. ಖಾದರ್ ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ಉಮಾನಾಥ ಎ. ಕೋಟ್ಯಾನ್, ಪರಿಷತ್ ಶಾಸಕ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಪುತ್ತೂರು ನಗರ ಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com