Breaking News

ಕಾಂಗ್ರೆಸ್ ನಿಂದ ಭಟ್ಕಳಕ್ಕೆ ಮಂಕಾಳ ವೈದ್ಯ ಅಭ್ಯರ್ಥಿ

 

ಕಾರವಾರ(ಭಟ್ಕಳ): ‘ಮುಸ್ಲಿಂ ಅಭ್ಯರ್ಥಿ’ ಯನ್ನು ಕಣಕ್ಕಿಳಿಸುವ ಒತ್ತಾಯದ ನಡುವೆಯೂ ಮಾಜಿ ಶಾಸಕ ಮಾಂಕಾಳು ವೈದ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ.  2013 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆದ್ದಿದ್ದ ಮಾಂಕಾಳ್ ವೈದ್ಯ 2018 ರಲ್ಲಿ ಕಾಂಗ್ರೆಸ್ ಸೇರಿ ಸ್ಪರ್ಧಿಸಿ ಸೋಲು ಕಂಡಿದ್ದರು.‌

  1.  

ಈ ಬಾರಿ ವಿಧಾನಸಭೆ ಚುನಾವಣೆಗೆ ಭಟ್ಕಳ ವಿಧಾನಸಭೆ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಆಗ್ರಹ ವ್ಯಾಪಕವಾಗಿ ಕೇಳಿ ಬಂದಿತ್ತು.  ಇತ್ತೀಚೆಗೆ ಭಟ್ಕಳದ ಪ್ರಮುಖ ಮುಸ್ಲಿಂ ಸಂಸ್ಥೆ ತಂಝೀಮ್ ನೇತೃತ್ವದಲ್ಲಿ 20 ರಂದು ನಡೆದ ಸರ್ವ ಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ಭಟ್ಕಳದಲ್ಲಿ ತಂಝೀಮ್ ಸಂಸ್ಥೆಯು ಮುಸ್ಲಿಮ್ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸುವುದರ ವಿರುದ್ಧ ನಿರ್ಣಯ ಕೈಗೊಂಡಿತ್ತು. ಆದರೆ ಯಾವುದೇ ಜಾತ್ಯತೀತ ಅಭ್ಯರ್ಥಿಯನ್ನು ಬೆಂಬಲಿಸುವ ಬಗ್ಗೆ ಮುಂದೆ ತೀರ್ಮಾನ ತೆಗೆದುಕೊಳ್ಳುವದಾಗಿ ತಂಝೀಮ್ ಹೇಳಿದೆ.

ಈ ನಡುವೆ ಮಾಜಿ ಶಾಸಕ ಮಾಂಕಾಳು ವೈದ್ಯಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಇನ್ನೂ ಜೆಡಿಎಸ್  ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಲಿದೆಯೇ ಎಂದು ಕಾದು ನೋಡಬೇಕಿದೆ. ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಅವರೇ ಜೆಡಿಎಸ್ ನಿಂದ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಜೆಡಿಎಸ್ ಟಿಕೆಟ್ ಕೊಟ್ಟರೆ ತಂಝೀಮ್ ನಿಂದ ಬೆಂಬಲ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com