Breaking News

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾ ಪೊಲೀಸರು

 

ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ವಜಾಗೊಳಿಸಿದ ಹಿನ್ನಲೆ ಲಂಚ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತುಮಕೂರು ಬಳಿ ಲೋಕಾಯುಕ್ತ ಪೊಲೀಸರು ಸೋಮವಾರ ರಾತ್ರಿ ಬಂಧನ ಮಾಡಿದರು.

ಪ್ರಕರಣದ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಅವರು ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠವು ಸೋಮವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಅಂತಿಮ ಆದೇಶವನ್ನು ಹೊರಡಿಸಿದೆ.

  1.  

ವಿರೂಪಾಕ್ಷಪ್ಪ ಅವರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡವು ಅವರ ನಿವಾಸಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿತ್ತು. ಚನ್ನಗಿರಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದಾಗ  ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಲೋಕಾಯುಕ್ತ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದರು. ಅವರ ಪುತ್ರ ಬಿಡಬ್ಲ್ಯೂಎಸ್‌ಎಸ್‌ಬಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಆಗಿದ್ದರು. ತಂದೆಯ ನಿಗಮದಲ್ಲಿ ಟೆಂಡರ್‌ ನೀಡಲು ಹಣ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು 6 ಕೋಟಿ ರೂಪಾಯಿ ನಗದು ಹಣದ ಜತೆಗೆ ಮಾಡಾಳ್ ಅವರ ಪುತ್ರ ಪ್ರಶಾಂತ್‌ ಅವರನ್ನು ಬಂಧನ ಮಾಡಿದ್ದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com