Breaking News

ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಆನ್ ಲೈನ್ ಮತದಾನಕ್ಕೆ ಆಯೋಗ ವ್ಯವಸ್ಥೆ

 

ಬೆಂಗಳೂರು:  ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಾಡಿದ ಮನವಿಯನ್ನುಆಯೋಗ ಪುರಸ್ಕರಿಸಿದೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

  1.  

ಬುಧವಾರ ಪ್ರಕಟಣೆಯಲ್ಲಿ ಈ ಕುರಿತು ತಿಳಿಸಿರುವ ಅವರು,  ಪತ್ರಕರ್ತರಿಗೆ ಇದೇ ಮೊದಲ ಬಾರಿಗೆ ಇಂತಹದೊಂದು ಅವಕಾಶವನ್ನು ಆಯೋಗ ಕಲ್ಪಿಸಿದೆ. ಇದರಿಂದಾಗಿ ಬೇರೆ ಬೇರೆ ಕಡೆಯಲ್ಲಿ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಯನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತೆ ಆಗಿದೆ ಎಂದು ತಿಳಿಸಿದ್ದಾರೆ.

ಆನ್‍ಲೈನ್ ವೋಟಿಂಗ್ ಗೆ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು. ದೃಶ್ಯ ಮುದ್ರಣ, ರೆಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿತ್ತು. ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದುದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್‍ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿತ್ತು ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com