Breaking News

ದಿಢೀರ್ ಕಾಂಗ್ರೆಸ್ ಹೈಕಮಾಂಡ್ ಬುಲಾವ್: ದೆಹಲಿಗೆ ಹಾರಿದ ಪದ್ಮರಾಜ್

 

ಮಂಗಳೂರು: ಬಿಲ್ಲವರೇ  ಅಧಿಕ ಸಂಖ್ಯೆಯಲ್ಲಿ ಇರುವ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಿಲ್ಲವ ಸಮುದಾಯದ ಯುವ ನಾಯಕ ವಕೀಲ ಪದ್ಮರಾಜ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದ್ದು, ಹೈಕಮಾಂಡ್ ಪದ್ಮರಾಜ್ ಅವರಿಗೆ ಬುಲಾವ್ ನೀಡಿದ್ದರಿಂದ ಅವರು ನವದೆಹಲಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ಜಿಲ್ಲೆಯ 8 ಕ್ಷೇತ್ರಗಳ ಪೈಕಿ 5 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಲಾಗಿದೆ‌‌. ಆದರೆ ಮಂಗಳೂರು ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಹೈಕಮಾಂಡ್‌ಗೆ ಸವಾಲಾಗಿದ್ದು ದೊಡ್ಡ ಕಗ್ಗಂಟು ಆಗಿಯೇ ಇದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಇದರ ಭಾಗವಾಗಿ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಈ ಬಾರಿ ಹೊಸ ಮುಖ ಎಂಟ್ರಿ ಆಗುತ್ತೆ ಎನ್ನುವ ಮಾತು ಹಾಗೂ ಹಿಂದೂ ಟ್ರಂಪ್ ಕಾರ್ಡ್ ಮಾಡುವುದಕ್ಕೆ ಕಾಂಗ್ರೆಸ್ ಮುಂದಾಗಿರುವುದು ತೀವ್ರ ಕುತೂಹಲಕ್ಕೆ ಕಾರಣ ಆಗಿದೆ.

  1.  

ಪದ್ಮರಾಜ್ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ, ಟಿಕೆಟ್‌ಗಾಗಿ ಅರ್ಜಿ ಕೂಡ ಹಾಕಿಲ್ಲ. ಆದರೂ ಕೂಡ ಅವರ ಬಗ್ಗೆ ಕಾಂಗ್ರೆಸ್ ಗೆ ಹೆಚ್ಚು ಒಲವು, ಕೆಲವು ಸಮಯದಿಂದ ಬಿಜೆಪಿ ಮತ್ತು ಸರಕಾರದ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಬಿಜೆಪಿ ಸರಕಾರ ಬಿಲ್ಲವರಿಗೆ ಮಾಡುತ್ತಿರುವ ಅನ್ಯಾಯದ ವಿರುದ್ಧ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿದ್ದರು ಎನ್ನಲಾಗಿದೆ.

ಜಿಲ್ಲೆಯಲ್ಲಿ ಕನಿಷ್ಟ 2 ಕ್ಷೇತ್ರದಲ್ಲಿ ಬಿಲ್ಲವರಿಗೆ ಟಿಕೆಟ್ ನೀಡಲು ಮುಂದಾಗಿರುವ ಹೈಕಮಾಂಡ್ ಈಗಾಗಲೆ ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಸಿದೆ. ಇನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೆ, ಅದು ಜಿಲ್ಲೆಯ ಇತರ ಕ್ಷೇತ್ರಗಳ ಮೇಲೂ ಪರಿಣಾಮ ಬೀರಬಹುದು ಎಂದು ಅರ್ಥ ಮಾಡಿಕೊಂಡಿರುವ ಹೈಕಮಾಂಡ್ ಮಂಗಳೂರು ನಗರ ದಕ್ಷಿಣದಲ್ಲಿ ಪದ್ಮರಾಜ್ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com