Breaking News

ಅಕ್ರಮ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ಬಂಧಿಸಿದ ಕದ್ರಿ ಪೊಲೀಸರು

c

 

ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಕದ್ರಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾರ್ಜ್ ಮಾರ್ಟಿಸ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಶಿಶಿರ್ ಎಂಬಾತ ಅಕ್ರಮವಾಗಿ ಪಿಸ್ತೂಲ್ ಮತ್ತು ಬುಲೆಟ್ ಹೊಂದಿದ್ದ ಎನ್ನಲಾಗಿದೆ.

  1.  

ಈ ಬಗ್ಗೆ ಮನೆಯ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಕದ್ರಿ ಪೊಲೀಸರು ಸೋಮವಾರ ಶಿಶಿರ್‌ನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಪಿಸ್ತೂಲ್ ಪತ್ತೆಯಾಗಿದೆ.

5 ತಿಂಗಳಿನಿಂದ ಶಿಶಿರ್ ಈ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತನಗೆ ಈ ಪಿಸ್ತೂಲ್‌ನ್ನು ತನ್ನ ಗೆಳೆಯ ನೀಡಿರುವುದಾಗಿ ಶಿಶಿರ್ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com