Breaking News

ಬಂಟ್ವಾಳ: ರಮಾನಾಥ ರೈ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ 12ಕ್ಕೆ

 

ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ಇದೇ 12 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

  1.  

ಬಿ.ಸಿ ರೋಡ್ ಪದ್ಮ ಪೆಟ್ರೋಲ್ ಬಂಕ್ ಎದುರಿನಲ್ಲಿ ಇರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ರಮಾನಾಥ ರೈ ಅವರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಕ್ಷದ ವಿವಿಧ ಸಮುದಾಯದ ಹಿರಿಯ ಮುಖಂಡರು, ಕಚೇರಿ ಉದ್ಘಾಟಿಸಲಿದ್ದಾರೆ.

ಅಭ್ಯರ್ಥಿ ಬಿ ರಮಾನಾಥ ರೈ, ಪಕ್ಷದ ವರಿಷ್ಟರು, ಬ್ಲಾಕ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com