Breaking News

ಅಪರೂಪಕ್ಕೆ ಚಿನ್ನ, ಬೆಳ್ಳಿ ದರ ಕೊಂಚ ಇಳಿಕೆ: ಗ್ರಾಹಕರು ಫುಲ್ ಖುಷ್

 

ಬೆಂಗಳೂರು: ಚಿನ್ನದ ದರದಲ್ಲಿ ಏರಿಕೆ ಇಳಿತ ಕಾಣುತ್ತಲೇ ಇರುತ್ತದೆ. ಅಪರೂಪ ಎನ್ನುವಂತೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಕೊಂಚ ಇಳಿಕೆ ಕಂಡಿದೆ. ಖರೀದಿಗೆ ಆಭರಣ ಪ್ರಿಯರ ಉತ್ಸಾಹ ಹೆಚ್ಚಿಸಿದೆ.

ಬೆಳ್ಳಿ ಬೆಲೆ 100 ಗ್ರಾಂ​ಗೆ 30 ರೂಪಾಯಿ ಇಳಿಕೆ ಕಂಡಿದೆ. ಇನ್ನೂ ದೇಸದಲ್ಲಿಯೇ ಚಿನ್ನದ ಬೆಲೆ 10 ಗ್ರಾಂ​ಗೆ 390 ರೂಪಾಯಿ ಅಷ್ಟು ಬೆಲೆ ಕಡಿಮೆ ಆಗಿದೆ. ಚಿನ್ನದ ಬೆಲೆ ಈಗ ಇಳಿದರೂ ಮುಂದಿನ ದಿನಗಳಲ್ಲಿ ಇದೇ ರಿತಿ ಇರುತ್ತೇ ಎಂದು ನಿರೀಕ್ಷಿಸಲಾಗದು. ಇತ್ತೀಚಿನ ಕೆಲ ವಾರಗಳ ಹಿಂದೆ ನಾಲ್ಕು ಸಾವಿರದಷ್ಟು ಏರಿಕೆ ಕಂಡಿತ್ತು. ಸದ್ಯ 10 ಗ್ರಾಂ​ನ 22 ಕ್ಯಾರಟ್ ಚಿನ್ನದ ಬೆಲೆ 55,400 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,430 ರೂಪಾಯಿ ದರ ಕಂಡಿದೆ. 100 ಗ್ರಾಂ ಬೆಳ್ಳಿ ಬೆಲೆ 7,630 ರೂಪಾಯಿಗೆ ಇಳಿದಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂ​ಗೆ 55,450 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 8,000 ರೂಪಾಯಿಗೆ ಇಳಿಕೆ ಕಂಡಿದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆ ಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

  1.  

ವಿದೇಶಗಳ ಚಿನಿವಾರ ಪೇಟೆಗಳಲ್ಲಿಯೂ ಚಿನ್ನದ ಬೆಲೆ ಇಳಿಕೆ ಕಂಡಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಕನಿಷ್ಠ 50 ಸಾವಿರ ರೂ. ಮಟ್ಟಕ್ಕೆ ಸಮೀಪ ಇವೆ. ಮಲೇಷ್ಯಾ, ಕತಾರ್ ಮತ್ತು ಓಮನ್​ನಲ್ಲಿ ಚಿನ್ನದ ಬೆಲೆ 52 ಸಾವಿರ ರೂಗಿಂತ ಹೆಚ್ಚಿದೆ.

ದೇಶದಲ್ಲಿ ಇಂದಿನ ಚಿನ್ನದ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,430 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 763 ರೂ.

ಬೆಂಗಳೂರು:  22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,480 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com