Breaking News

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇಬ್ಬರು ನಾಮಪತ್ರ ಸಲ್ಲಿಕೆ

 

ಮಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ನಾಮಪತ್ರ ಸಲ್ಲಿಕೆಯ ಮೊದಲ ದಿನ ಗುರುವಾರ, 202 ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಯಶೋಧಾ ಹಾಗೂ ಜೆ.ಡಿ.ಯು ಪಕ್ಷದ ಅಭ್ಯರ್ಥಿಯಾಗಿ ಸುಪ್ರಿತ್ ಕುಮಾರ್ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

  1.  

200 ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, 201 ಮೂಡಬಿದ್ರೆ ವಿಧಾನಸಭಾ ಕ್ಷೇತ್ರ, 203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ, 204 ಮಂಗಳೂರು ವಿಧಾನಸಭಾ ಕ್ಷೇತ್ರ, 205 ಬಂಟ್ವಾಳ ವಿಧಾನ ಸಭಾ ಕ್ಷೇತ್ರ, 206 ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ 207 ಸುಳ್ಯ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ಏ. 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಏ.21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com