Breaking News

ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಸೇರಿದಂತೆ 13 ನಾಮಪತ್ರ ಸಲ್ಲಿಕೆ

 

ಉಡುಪಿ: ಮೇ 10 ರಂದು ನಡೆವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೂರನೇ ದಿನ ಸೋಮವಾರ ಜಿಲ್ಲೆಯಲ್ಲಿ ಒಟ್ಟು 13   ನಾಮಪತ್ರಗಳು ಸಲ್ಲಿಕೆ ಆಗಿವೆ.

118 ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಯ ಗುರುರಾಜ ಶೆಟ್ಟಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿದ್ದಾರೆ.

119 ಕುಂದಾಪುರ  ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ, ಭಾರತೀಯ ಜನತಾ ಪಾರ್ಟಿಯ ಕಿರಣ್ ಕುಮಾರ್ ಕೊಡ್ಗಿ ಅವರು 3 ನಾಮಪತ್ರ ಸಲ್ಲಿಸಿದ್ದಾರೆ.

120 ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಪ್ರಸಾದ ರಾಜ್ ಕಾಂಚನ್, ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಅಚಾರ್ಯ ಇಂದು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

  1.  

121 ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಗುರ್ಮೆ ಸುರೇಶ್ ಶೆಟ್ಟಿ  2 ನಾಮಪತ್ರಗಳನ್ನು ಹಾಗೂ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಅಭ್ಯರ್ಥಿಯಾಗಿ ಮೊಹಮದ್ ಹನೀಫ್ ಸೋಯಲ್ ನಾಮಪತ್ರ ಸಲ್ಲಿಸಿದ್ದಾರೆ.

122 ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ  ವಿದ್ಯಾಲಕ್ಷ್ಮಿ 2 ನಾಮಪತ್ರ ಸಲ್ಲಿಸಿದ್ದಾರೆ.

ಈ ಮೂಲಕ  ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ  3, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 6, ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 4, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 3, ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ 4 ಸೇರಿದಂತೆ  ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಏ. 20 ಕೊನೆ ದಿನ ಆಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ ಆಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com