Breaking News

ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

 

ಮೂಡುಬಿದಿರೆ: ಮೂಲ್ಕಿ– ಮೂಡುಬಿದಿರೆ  ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರ ಜತೆಗೆ ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಆಡಳಿತಸೌಧಕ್ಕೆ  ಬಂದು   ಚುನಾವಣಾಧಿಕಾರಿ ಮಹೇಶ್ಚಂದ್ರ ಅವರ ಕಚೇರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದರು.

ಕಾರ್ಯಕರ್ತರ ಸಭೆಯಲ್ಲಿ ಮಿಥುನ್ ರೈ ಅವರು ಮಾತನಾಡಿ,  ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಳಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ ಎಂದರು.

  1.  

ನನ್ನ ರಾಜಕೀಯ ಗುರು ಅಭಯಚಂದ್ರ ಕೃಷ್ಣ, ನಾನು ಅರ್ಜುನ ಎಂದರು. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರ ಜೈನ್ ಅವರ ಕೊಡುಗೆ ಯಾರೂ ಮರೆಯುವಂತಿಲ್ಲ ಎಂದರು.

ಕೆಪಿಸಿಸಿ ವಕ್ತಾರ, ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳಿ ಮಾತನಾಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ’ ಮಿಥುನ್ ರೈ ಅವರನ್ನು ಮೂಡುಬಿದಿರೆಗೆ ಆರಿಸಿದ್ದು ಕೆಪಿಸಿಸಿ ಅಲ್ಲ, ಮೂಡುಬಿದಿರೆ ಜನರೇ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದ್ದಾರೆ’ ಎಂದರು.

ಎಂಎಲ್‍ಸಿ ಹರೀಶ್ ಕುಮಾರ್,  ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ದೇವಿಪ್ರಸಾದ್ ಶೆಟ್ಟಿ,  ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಲುಕ್ಮಾನ್ ಬಂಟ್ವಾಳ್, ಮುಖಂಡರಾದ ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಸುಪ್ರಿಯಾ ಡಿ. ಶೆಟ್ಟಿ, ಪ್ರತಿಭಾ ಕುಳಾಯಿ ಇದ್ದರು.

ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಕಾರ್ಯಕ್ರಮ ನಿರೂಪಿಸಿದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com