
ಕಡಬ: ಕಾರು ಮತ್ತು ಕ್ರೂಷರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ನೆಟ್ಟಣ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಕಾರು ಮತ್ತು ಕ್ರೂಷರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ ಎಂದು ತಿಳಿದು ಬಂದಿದೆ. ಮೃತಪಟ್ಟಿರುವವರ ವಿವರ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದ್ದು ಮಾಹಿತಿಗೆ ನಿರೀಕ್ಷೆ ಮಾಡಲಾಗುತ್ತಿದೆ.


