Breaking News

ನಾಮಪತ್ರ ಸಲ್ಲಿಕೆ ಭರಾಟೆಗೆ ತೆರೆ: ನಾಮಪತ್ರ ಪರಿಶೀಲನೆ 21 ರಂದು

 

ಮಂಗಳೂರು: ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಗುರುವಾರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ಪೂಂಜ ಎರಡು ಸೆಟ್,  ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಅಶ್ರಫ್ ಆಲಿ ಕುಂಞ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ. ಸುಬ್ರಹ್ಮಣ್ಯ ಭಟ್ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಅಮರಶ್ರೀ ಅಮರನಾಥ ಶೆಟ್ಟಿ ಎರಡು ಸೆಟ್ ಹಾಗೂ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಉಮಾನಾಥ್ ಕೋಟ್ಯಾನ್ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಂ. ನವಾಜ್, ಪಕ್ಷೇತರ ಅಭ್ಯರ್ಥಿಯಾಗಿ ಉಸ್ಮಾನ್,  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ 2 ಸೆಟ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಮೊಯಿದ್ದಿನ್ ಬಾವಾ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಸುಮತಿ ಎಸ್ ಹೆಗಡೆ 2 ಸೆಟ್,  ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾನ್ ರಿಚರ್ಡ್ ಲೋಬೋ ನಾಲ್ಕು ಸೆಟ್,  ಪಕ್ಷೇತರ ಅಭ್ಯರ್ಥಿಯಾಗಿ ಕೆ. ಸುಬ್ರಾಯ ಪೈ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶನನ್ ಲಾರೆನ್ಸ್ ಪಿಂಟೊ ಸಲ್ಲಿಸಿದ್ದಾರೆ.

ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಮಹಮ್ಮದ್ ಅಶ್ರಫ್, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸತೀಶ್ ಗುಂಪಲ, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಚಂದ್ರಹಾಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್ ಮೂರು ಸೆಟ್, ಜನ ಹಿತ ಪಕ್ಷದ ಅಭ್ಯರ್ಥಿಯಾಗಿ ಬಾಲಕೃಷ್ಣ ಪೂಜಾರಿ ಬೋಳಿಯಾರ್, ಎಸ್ ಡಿ ಪಿ ಐ ಅಭ್ಯರ್ಥಿಯಾಗಿ ಮಹಮ್ಮದ್ ಅತಾವುಲ್ಲಾ ಎ ಹಾಗೂ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಅಲ್ತಾಫ್ ಉಮೇದುವಾರಿಕೆ ಸಲ್ಲಿಸಿದ್ದಾರೆ.

  1.  

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ್ ರೈ,  ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪ್ರಕಾಶ್ ರಫಾಯಲ್ ಗೊಮ್ಸ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅನಿಶ್ ಶೆಟ್ಟಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ. ಕುಮಾರ್ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ದಿವ್ಯ ಪ್ರಭ, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ 2ಸೆಟ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಭಾಗಿರಥಿ, ಪಕ್ಷೇತರ ಅಭ್ಯರ್ಥಿಯಾಗಿ ಗುರುವಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಸುಂದರ್ ಮೇರಾ, ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಬಿ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಗಣೇಶ ಎಂ ಉಮೇದುವಾರಿಕೆ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಆರಂಭವಾದ ದಿನದಿಂದ ಇದೂವರೆಗೆ ಒಟ್ಟು  82 ಅಭ್ಯರ್ಥಿಗಳು 109 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಇದೇ 24 ಕೊನೆ ದಿನ. ಮೇ 10 ಚುನಾವಣೆ ನಡೆಯಲಿದ್ದು 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com