
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ 2ನೇ ಸ್ಥಾನ, ಕೊಡುಗು ಜಿಲ್ಲೆಗೆ ಮೂರನೇ ಸ್ಥಾನ, ಉತ್ತರ ಕನ್ನಡ ನಾಲ್ಕನೇ ಸ್ಥಾನ, ಲಭಿಸಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ. ಕರಾವಳಿ ಜಿಲ್ಲೆಗಳು ಪರೀಕ್ಷೆ ಫಲತಾಂಶದಲ್ಲಿ ಸಿಂಹಪಾಲು ಪಡೆದುಕೊಂಡಿದೆ. ಬೆಳಿಗ್ಗೆ 11 ಗಂಟೆ ಬಳಿಕ ಅಧಿಕೃತ ವೆಬ್‌ಸೈಟ್ www.karresults.nic.in ನಲ್ಲಿ ಪಡೆಯಬಹುದು. ಪಿಯುಸಿ ಪರೀಕ್ಷೆಯ ಫಲಿತಾಂಶ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಿದ್ದು. ಒಂದು ಗಂಟೆಯ ಬಳಿಕ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಸ ಅಪ್‌ಡೇಟ್ ಆಗಲಿದೆ. ಫಲಿತಾಂಶ ಪ್ರಕಟವಾದ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 61.22ರಷ್ಟು ಫಲಿತಾಂಶ ದಾಖಲಿಸಿದ್ದಾರೆ.
ಫಲಿತಾಂಶ ನೋಡಲು ಈ ಲಿಂಕ್ ಗೆ ಸಂಪರ್ಕ ಮಾಡಿ. www.karresults.nic.in


