Breaking News

ಬಿಜೆಪಿ ಅಭ್ಯರ್ಥಿ ಸೋಮಣ್ಣ ಪ್ರಚಾರಕ್ಕೆ ಅವಕಾಶ ನೀಡಿ: ಸಿದ್ದರಾಮಯ್ಯ

 

ಬೆಂಗಳೂರು: ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವ ಬಗ್ಗೆ ವಿಪಕ್ಷ ನಾಯಕ ಹಾಗೂ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ.ಇದನ್ನು ನಮ್ಮಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕುಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

  1.  

ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆಎಂದು ತಿಳಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ  ಚುನಾವಣಾ ಪ್ರಚಾರಕ್ಕೆ ಸೋಮಣ್ಣ ಅವರಿಗೆ ಬುಗತಹಳ್ಳಿ ಗ್ರಾಮದಲ್ಲಿ ಕಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಇನ್ನು ಸೋಮಣ್ಣ ಅವರ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಕೊಡಗುಮೈಸೂರು ಸಂಸದ ಪ್ರತಾಪಸಿಂಹ ಅವರನ್ನು ಕುಪ್ಯ ಗ್ರಾಮದಲ್ಲಿ ಜನರು ತರಾಟೆಗೆ ತೆಗೆದುಕೊಂಡಿದ್ದರು

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com