Breaking News

3 ರಂದು ಮೋದಿ ಸಮಾವೇಶ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

 

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶವು ಇದೇ 3 ರಂದು ಮೂಲ್ಕಿ ಸಮೀಪ  ನಡೆಯುವ ಹಿನ್ನಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬೆಳಿಗ್ಗೆ  7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬದಲಾವಣೆ ಮಾಡಲಾಗಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುವ ಎಲ್ಲ ವಾಹನಗಳು ಮೂಲ್ಕಿ ವಿಜಯ ಸನ್ನಿದಿ ಬಳಿ ಎಡಕ್ಕೆ ಚಲಿಸಿ ಕಿನ್ನಿಗೋಳಿಕಟೀಲುಬಜ್ಪೆ ಕಾವೂರು ಮಾರ್ಗವಾಗಿ ಮಂಗಳೂರು ಕಡೆಗೆ ಸಂಚಾರ ಮಾಡಬೇಕು. ಮಂಗಳೂರಿನಿಂದ ಉಡುಪಿಗೆ ತೆರಳುವ ವಾಹನಗಳು ಕೆಪಿಟಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಬೊಂದೇಲ್ಕಾವೂರುಬಜ್ಪೆ ಕಟೀಲುಕಿನ್ನಿಗೋಳಿಮೂಲ್ಕಿ ಕಡೆಗೆ ಅಥವಾ ಕುಳೂರು ಜಂಕ್ಷನ್‌ನಲ್ಲಿ ಬಲಕ್ಕೆ ಚಲಿಸಿ ಕಾವೂರುಬಜ್ಪೆ, ಕಟೀಲುಕಿನ್ನಿಗೋಳಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬೇಕು.

ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ತೆರಳುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆಎಸ್.ಕೋಡಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

  1.  

ವಾಹನ ನಿಲುಗಡೆ ನಿಷೇಧ:  ಹಳೆಯಂಗಡಿ ಜಂಕ್ಷನ್‌ನಿಂದ ಮೂಲ್ಕಿ ವಿಜಯ ಸನ್ನಿಧಿಯವರೆಗೆ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಕೆ.ಎಸ್.ರಾವ್ ನಗರಕ್ಕೆ ಹೋಗುವ ರಸ್ತೆ, ಕೊಲ್ನಾಡು ಜಂಕ್ಷನ್‌ನಿಂದ ಕೈಗಾರಿಕಾ ಪ್ರದೇಶಕ್ಕೆ ತೆರಳುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.

ವಾಹನ ನಿಲುಗಡೆ ಪ್ರದೇಶಗಳು: ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಬೆಳಿಗ್ಗೆ 9 ಗಂಟೆಯ ಒಳಗಾಗಿ ಸಾರ್ವಜನಿಕರನ್ನು ಕಾರ್ಯಕ್ರಮ ಸ್ಥಳದ ಪ್ರವೇಶ ದ್ವಾರಕ್ಕೆ ತರೆತರಬೇಕು. ಜಾಗತಿಕ ಬಂಟರ ಸಂಘದ ಬಳಿಯ ವಾಹನ ನಿಲುಗಡೆ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು. ಉಡುಪಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್‌ಗಳು ಕಾರ್ನಾಡು ಬೈಪಾಸ್‌ನಲ್ಲಿ ಸಾರ್ವಜನಿಕರನ್ನು ಇಳಿಸಿ ಬಂಟರ ಸಂಘದ ಬಳಿಯ ಪಡುಬೈಲ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಅವಕಾಶ ಮಾಡಿಕೊಡಲಾಗಿದೆ.

ಮಂಗಳೂರು ಹಾಗೂ ಉಡುಪಿ ಕಡೆಯಿಂದ ಬರುವ ಸಾರ್ವಜನಿಕ ಭಾರಿ ವಾಹನಗಳು ಹಾಗೂ ಬೈಕ್ ಕಾರ್ಯಕ್ರಮ ಸ್ಥಳದ ಎದುರಿನ ಅಂದರೆ ಉಡುಪಿಮಂಗಳೂರು ರಾಷ್ಟ್ರೀಯ ಹೆದ್ದಾರಿ ಎಡಬದಿಯಲ್ಲಿ ನಿಲುಗಡೆ ಮಾಡಬೇಕು. ಮಂಗಳೂರು ಕಡೆಯಿಂದ ಆಗಮಿಸುವ ಸಾರ್ವಜನಿಕ ವಾಹನಗಳು ಮಂಗಳೂರುಉಡುಪಿ ರಸ್ತೆಯಲ್ಲಿರುವ ಸುಂದರರಾಮ್ ಶೆಟ್ಟಿ ಸಭಾಂಗಣದ ಬಳಿಯ ವಾಹನ ನಿಲುಗಡೆ ಸ್ಥಳದಲ್ಲಿ ನಿಲುಗಡೆ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳು ಕಾರ್ಯಕ್ರಮ ಸ್ಥಳದ ಪಶ್ಚಿಮ ಬದಿಯಲ್ಲಿನ ಎಂದರೆ ಮಂಗಳೂರುಉಡುಪಿ ರಸ್ತೆಯ ಎಡಬದಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *