Breaking News

ಭಗವಾನ್ ಹನುಮಾನ್ ಗೆ ಮೋದಿ ಅವಮಾನ: ಎಐಸಿಸಿ ವಕ್ತಾರ ಪ್ರೊ.ಗೌರವ್ ವಲ್ಲಭ್

 

ಮಂಗಳೂರು: ಭಗವಾನ್ ಹನುಮಾನ್  ಅವಮಾನಿಸುವ  ಮೂಲಕ ಹನುಮಾನ್ ಭಕ್ತರ ಭಾವನೆಗೆ ಧಕ್ಕೆ ತಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು  ಎಂದು ಆರೋಪಿಸಿರುವ ಎಐಸಿಸಿ ವಕ್ತಾರ ಪ್ರೊ.ಗೌರವ್ ವಲ್ಲಭ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಭಗವಾನ್ ಹನುಮಾನ್ ಮೇಲಿನ ನಮ್ಮ ನಂಬಿಕೆಯನ್ನು ಅವಮಾನಿಸುತ್ತಿದ್ದಾರೆ. ಅವರು ಹನುಮಾನ್ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಅವರು ದೇಶದ ಕ್ಷಮೆಯಾಚಿಸಬೇಕು. ಬಜರಂಗ ಬಲಿಯನ್ನು ಅವಮಾನಿಸುವ ಹಕ್ಕನ್ನು ಯಾರೂ ಪ್ರಧಾನಿಗೆ ನೀಡಿಲ್ಲ ಎಂದರು.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯೊಂದಿಗೆ ಹನುಮಂತನನ್ನು ಸಮೀಕರಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡಿಗರಲ್ಲಿ ಕ್ಷಮೆ ಯಾಚಿಸಬೇಕು .ಇಲ್ಲವಾದರೆ ಲಕ್ಷಾಂತರ ಹನುಮಂತ ಭಕ್ತರು ಇದರ ವಿರುದ್ಧ ಸಂಪೂರ್ಣ ಕಠಿಣ ಹೋರಾಟ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದದೇ ಹೇಳಿಕೆ ನೀಡಿರುವುದು ಸ್ಪಷ್ಟ. ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ ಎಂದರು.

  1.  

ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳು ಬಜರಂಗದಳ ಮತ್ತು ಪಿಎಫ್ಐ ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಪ್ರಧಾನಿ ಇದನ್ನು ಅರ್ಥ ಮಾಡಿಕೊಂಡಿಲ್ಲ. ಅವರು ಕಾಂಗ್ರೆಸ್ನ ಪ್ರಣಾಳಿಕೆ ಓದಲಿ. ಅವರು ತಪ್ಪಾಗಿ ಅರ್ಥಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್ ಹೊಣೆಯಲ್ಲ. ಕಾಂಗ್ರೆಸ್ ತನ್ನ ನಿಲುವಿನಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಈಚೆಗೆ ದಲಿತ ಸಮುದಾಯದ ವ್ಯಕ್ತಿಯೊಬ್ಬರ ಕೊಲೆಯ ಆರೋಪಿ ಬಜರಂಗ ದಳ ಕಾರ್ಯಕರ್ತನ ಮೇಲೆ ಪ್ರಕರಣ ದಾಖಲಾಗಿರುವುದು ವರದಿ ಆಗಿತ್ತು.  ಸರಕಾರ ಈ ಕೊಲೆ ಪ್ರಕರಣದ ಬಗ್ಗೆ ವೌನವಾಗಿದೆ. ಪ್ರಧಾನಿ ಮೋದಿ ಅವರು ಹತ್ಯೆಯಾಗಿರುವ ಯುವಕನ ಮನೆಗೆ ಹೋಗಿ ಕನಿಷ್ಠ ಸಾಂತ್ವನ ನೀಡಲಿ ಎಂದು ಆಗ್ರಹಿಸಿದರು.

ಕರ್ನಾಟಕದ ಬಿಜೆಪಿ ಸರಕಾರ ವಿರುದ್ಧ ಗುತ್ತಿಗೆದಾರರ ಸಂಘ, ಶಿಕ್ಷಕರು ಪ್ರಧಾನಿಗೆ ದೂರು ನೀಡಿದ್ದರೂ ಅವರು ಕ್ರಮಕೈಗೊಂಡಿಲ್ಲ. ಪಿಎಸ್ಐ ನೇಮಕಾತಿ ಹಗರಣ, ಸಿಎಂ ವಿರುದ್ಧ ಅವರ ಪಕ್ಷದ ಶಾಸಕರೇ ಆರೋಪ ಮಾಡಿದ್ದರೂ ಪ್ರಧಾನ ಮಂತ್ರಿ ಮೋದಿ ವೌನವಾಗಿದ್ದಾರೆ ಎಂದು ಆರೋಪಿಸಿದರು.

ಎಐಸಿಸಿ ವೀಕ್ಷಕ ಚರಣ್ ಸಿಂಗ್ ಸಪ್ರಾ, ಕೇರಳ ವಿಧಾನ ಸಭೆಯ ಮಾಜಿ ವಿಪಕ್ಷ ನಾಯಕ ರಮೇಶ್ ಚೆನ್ನಿತಲ, ಕಾಸರಗೋಡು ಸಂಸದ ರಾಜಮೋಹನ್ ಉನ್ನಿತಾನ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್  ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com