Breaking News

ನನ್ನ ಕಚೇರಿಯಲ್ಲಿನ ಮೋದಿ, ಶಾ ಪೋಟೊ ತೆಗೆಯಲ್ಲ: ಜಗದೀಶ್ ಶೆಟ್ಟರ್

 

ಹುಬ್ಬಳ್ಳಿ:  ನನ್ನ ಕಚೇರಿಯಲ್ಲಿ ಇರುವ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ತೆಗೆಯಲ್ಲಎಂದು ಮಾಜಿ ಮುಖ್ಯಮಂತ್ರಿಹುಬ್ಬಳ್ಳಿಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ

  1.  

ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರುನನ್ನ ಕಚೇರಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರ ಇರುವುದರಲ್ಲಿ ಆಶ್ಚರ್ಯ ಪಡುವಂತದ್ದೇನಿದೆ ? ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣವೇ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲಎಂದು ತಿಳಿಸಿದರು.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ, ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು

  1.  

Leave a Reply

Your email address will not be published. Required fields are marked *