Breaking News

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಬಿಜೆಪಿ ಸಂಚು: ಸುರ್ಜೇವಾಲಾ

 

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಪ್ರಕಟಣೆಯಲ್ಲಿ ಗಂಭೀರ ಆರೋಪ ಮಾಡಿದರು.

ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿರುವುದು ಬಿಜೆಪಿ ನಿದ್ದೆಗೆಡಿಸಿದ್ದು, ಮಲ್ಲಿಕಾರ್ಜುನ ಖರ್ಗೆ, ಅವರ ಕುಟುಂಬಸ್ಥರ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.

  1.  

ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಅಡಿಯೊದಲ್ಲಿ ಈ ಸಂಚು ಸ್ಪಷ್ಟವಾಗಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ಕನ್ನಡನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೆ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿಗೆ,  ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರದ ಬಗ್ಗೆ “ಪ್ರಧಾನಿ ಮೌನವಾಗಿರುತ್ತಾರೆ ಎಂಬುದು ನನಗೆ ಗೊತ್ತಿದೆ. ಇದೇ ರೀತಿಯಲ್ಲಿಯೇ ಪೊಲೀಸರು ಹಾಗೂ ಚುನಾವಣಾ ಆಯೋಗ ಕೂಡ ವರ್ತಿಸುತ್ತಿದೆ ಎಂಬುದೂ ತಿಳಿದಿದೆ. ಆದರೆ, ಕರ್ನಾಟಕದ ಜನರು ಮೌನವಾಗಿರುವುದಿಲ್ಲ. ಇದಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ. ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮಣಿಕಾಂತ್ ರಾಥೋಡ್ ಅವರನ್ನು ನ. 13, 2022 ರಂದು ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಳಿಕ ಸುದ್ದಿಗೋಷ್ಟಿ ನಡೆಸಿದ್ದ ರಾಥೋಡ್, ಪ್ರಿಯಾಂಕ್ ಖರ್ಗೆ ಅವರನ್ನು ಹೊಡೆದುರುಳಿಸಲು ಸಿದ್ಧ ಎಂದು ಬಹಿರಂಗ ಹೇಳಿಕೆ ನೀಡಿದ್ದ ಎಂದು ತಿಳಿಸಿದ್ದಾರೆ.

ಮೇ 2 ರಂದು, ಬಿಜೆಪಿ ಶಾಸಕ ಮತ್ತು ಆ ಪಕ್ಷದ ಪ್ರಧಾನ ಕಾರ್ಯದರ್ಶಿ, ಮದನ್ ದಿಲಾವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ “ಸಾವು” ಬಯಸಿದ್ದರು. ಇದೀಗ ಬಿಜೆಪಿ ಖರ್ಗೆ ಅವರ ಹತ್ಯಗೆ ಸಂಚು ರೂಪಿಸುತ್ತಿದೆ. ಖರ್ಗೆ ಅವರ ಮೇಲಿನ ದಾಳಿ ಸಂಚು ಮಾತ್ರವಲ್ಲ, ಕನ್ನಡಿಗರ ಮೇಲೆ ದಾಳಿ ಮಾಡುವ ಸಂಚು ಇದಾಗಿದೆ. ಇಷ್ಟೆಲ್ಲ ಆದರೂ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಮೌನಕ್ಕೆ ಶರಣಾಗಿದೆ. ಆದರೆ, ರಾಜ್ಯದ 6.50 ಕೋಟಿ ಕನ್ನಡಿಗರು ಈ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com