Breaking News

ಮತದಾನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ರವಿಕುಮಾರ್ ಚಾಲನೆ

 

ಮಂಗಳೂರು: ಮತದಾನ ಪವಿತ್ರ ಹಕ್ಕು. ಮೇ 10 ರಂದು ನಗರದ ಮತದಾರರು ಸಮೀಪದ ಮತಗಟ್ಟೆಗೆ ಬಂದು ಹಕ್ಕಅನ್ನು ಚಲಾಯಿಸಿ, ಉತ್ತಮ ಜನಪ್ರತಿನಿಧಿ ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ  ಹಾಗೂ ಮ‌ಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ   ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾನ ಕಾಲ್ನಡಿಗೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

  1.  

ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕೆಎಚ್, ಮಂಗಳೂರು ವಿವಿ ಕುಲಸಚಿವ ಡಾ. ಕಿಶೋರ್ ಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಸೇರಿದಂತೆ ಮಂಗಳೂರು ವಿವಿ ರಾಷ್ಟ್ರೀಯ ಸೇವಾಯೋಜನೆ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟ ಜಾಥಾವು ಮೀನು ಮಾರುಕಟ್ಟೆಯಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿತು. ರಥಬೀದಿಯಲ್ಲಿ ಸಾಗಿ ಬಂದು ಕೊನೆಗೊಂಡಿತು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com