Breaking News

ಮತದಾನದ ಕೇಂದ್ರಕ್ಕೆ ಮೊಬೈಲ್ ನಿಷೇಧ: ಜಿಲ್ಲಾಧಿಕಾರಿ ಕೂರ್ಮಾರಾವ್

 

ಉಡುಪಿ: ಮತದಾನ ಕೇಂದ್ರದ 100 ಮೀಟರ್  ವ್ಯಾಪ್ತಿಯೊಳಗೆ ಮತಗಟ್ಟೆ ಅಧಿಕಾರಿಯನ್ನು ಹೊರತು ಪಡಿಸಿ ಮತದಾರರು ಸೇರಿದಂತೆ ಉಳಿದ ಯಾರೂ ಕೂಡ ಮೊಬೈಲ್ ತೆಗೆದುಕೊಂಡು ಹೋಗುವುದಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

  1.  

ಮೊಬೈಲ್ ಫೋನ್, ಕಾರ್ಡ್‌ಲೆಸ್ ಪೋನ್‌ಗಳನ್ನು ಮತದಾನ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿರ್ಭಂದಿಸಲಾಗಿದೆ. ಅಲ್ಲದೇ ಮತದಾನ ಕೇಂದ್ರದ 100 ಮೀ. ವ್ಯಾಪ್ತಿಯೊಳಗೆ, ಯಾವುದೇ ಸಾರ್ವಜನಿಕ ಹಾಗೂ ಖಾಸಗಿ ಜಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದ್ದಾರೆ.

ಮತದಾನ ಕೇಂದ್ರದೊಳಗೆ ಯಾವುದೇ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನಿರಾಕರಿಸಲಾಗಿದೆ. ಮತದಾನವು ನಾಳೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ ಎಂದು ತಿಳಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com