Breaking News

ಉಡುಪಿ: ಸೊರಕೆ, ಯಶ್ಪಾಲ್, ಮುತಾಲಿಕ್, ಪೂಜಾರಿ, ಗಂಟಿಹೊಳಿ, ಕಾಂಚನ್ ಮತದಾನ

 

ಉಡುಪಿ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಯಿತು.  ಮತದಾರರು ಮತಗಟ್ಟೆಗಳಿಗೆ ಬಂದು ಸರತಿ ಸಾಲಿನಲ್ಲಿ ನಿಂತು ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡು ಬಂತು.

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಮ್ಮ ಹಕ್ಕನ್ನು ಪತ್ನಿ ಮತ್ತು ಪುತ್ರನ ಜತೆಗೆ ಚಲಾಯಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಸೊರಕೆ ಅವರ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಸೊರಕೆ ಮತ್ತು ಯಶ್ ಪಾಲ್ ಸುವರ್ಣ ಎದುರುಗೊಂಡರು, ಈ ವೇಳೆ ಪರಸ್ಪರ ಹಸ್ತಲಾಘ ಮಾಡಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

  1.  

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಪತ್ನಿ ಜತೆಗೆ  ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಲ್ಲಿ ಮತ ಚಲಾಯಿಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಘಂಟಿಹೊಳೆ ಅವರು ಹಕ್ಕನ್ನು ಚಲಾಯಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಪತ್ನಿ‌ ಹಾಗೂ ಕುಟುಂಬ ಸದಸ್ಯರ ಜತೆಗೆ ಬಂದು ಕನ್ಯಾನ ಶಾಲೆಯ ಮತಗಟ್ಟೆಯಲ್ಲಿ ಮೊದಲ ಮತದಾನ‌ ಮಾಡಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ತಮ್ಮ ಬೆಂಬಲಿಗರೊಂದಿಗೆ ತೆರಳಿ ಮತ ಚಲಾಯಿಸಿದರು.

ಕನ್ಯಾನ ಮತಗಟ್ಟೆಯ ಇವಿಎಂ ಯಂತ್ರದ‌ ಬಳಿ ಬೆಳಕಿನ ಕೊರತೆ ಇದ್ದ ಕಾರಣ, ಯಂತ್ರದಲ್ಲಿನ ಹೆಸರು, ಚಿಹ್ನೆ ಅಸ್ಪಷ್ಟ ಕಾಣಿಸುತ್ತಿದೆ ಎಂದು ಅಭ್ಯರ್ಥಿ ಗೋಪಾಲ ಪೂಜಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com