Breaking News

ಹರಿಪ್ರಸಾದ್ ಗೆ ಗೃಹ ಖಾತೆ ನೀಡಲು ಅಭಯಚಂದ್ರ ಜೈನ್ ಮನವಿ

 

ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಗೃಹ ಸಚಿವರಾಗುವುದಕ್ಕೆ ಸೂಕ್ತ ವ್ಯಕ್ತಿಯಾಗಿದ್ದು, ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ  ಕಾರ್ಯನಿರ್ವಹಿಸುತ್ತಿರುವ ಅವರಿಗೆ ದೊಡ್ಡ ಖಾತೆಯನ್ನು ನೀಡಬೇಕು ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಶುಕ್ರವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಬಹುತೇಕ ಕಡೆ ಜಯಗಳಿಸಿದ್ದರೂ ಕರಾವಳಿಯಲ್ಲಿ ಹಿನ್ನಡೆ ಅನುಭವಿಸಿದೆ. ಈ ಹಿಂದೆ ಆಸ್ಕರ್ ಫರ್ನಾಂಡಿಸ್, ಜನಾರ್ದನ ಪೂಜಾರಿ, ವೀರಪ್ಪ ಮೊಯಿಲಿ ಸಕ್ರಿಯರಾಗಿದ್ದಾಗ ನಾಯಕರ ಕೊರತೆ ಇರಲಿಲ್ಲ. ಈ ಕೊರತೆ ನೀಗಿಸಲು ಬಿ.ಕೆ.ಹರಿಪ್ರಸಾದ್ ಅವರಿಗೆ ಗೃಹ ಖಾತೆಯನ್ನು ನೀಡಬೇಕು ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಹರಿಪ್ರಸಾದ್  ಅವರನ್ನು ನೇಮಕ ಮಾಡುವುದು ಸೂಕ್ತ. ಅವರಿಂದ ಜಿಲ್ಲೆಯಲ್ಲಿ ಸಾಮರಸ್ಯದ ಜತೆಗೆ ಅಭಿವೃದ್ಧಿ ಸಾಧ್ಯ ಎಂದು. ನೂತನ ಸರ್ಕಾರಕ್ಕೆ ಜನರಿಗೆ ನೀಡಿರುವ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಹೊಣೆಗಾರಿಕೆ ಇದೆ. ಇದನ್ನು ಸಮರ್ಪಕವಾಗಿ ನಿಭಾಯಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅಭಯಚಂದ್ರ ಜೈನ್ ತಿಳಿಸಿದರು.

ಯುವಕರಿಗೆ ಅವಕಾಶ ನೀಡಬೇಕು. ಈ ಹಿನ್ನಲೆಯಲ್ಲಿ ನಾನು ವಿಧಾನ ಪರಿಷತ್ ಸದಸ್ಯತ್ವದ ಆಕಾಂಕ್ಷಿಯಲ್ಲ. ಆದರೆ, ಮೂಡುಬಿದಿರೆ ಕ್ಷೇತ್ರದಲ್ಲಿ ಪರಾಜಿತ ಮಿಥುನ್ ರೈ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿರುವ ಯು.ಟಿ.ಖಾದರ್ ಗೆ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆ ನೀಡಬೇಕು. ರಮಾನಾಥ ರೈ ಅವರಿಗೆ ಖಾತೆ ನೀಡಿದರೂ ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.

  1.  

ಪುತ್ತೂರಿನಲ್ಲಿ ನಳಿನ್ ಕುಮಾರ್ ಕಟೀಲು ಹಾಗೂ ಡಿ.ವಿ.ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಆರೋಪದಲ್ಲಿ ಬಂಧಿತ ಯುವಕರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯಕ್ಕೆ  ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ನೇರ ಹೊಣೆ ಎಂದು ಅಭಯಚಂದ್ರ ಆರೋಪಿಸಿದರು.

ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವಾಗ ಈ ಘಟನೆ ನಡೆದಿದೆ. ಅದಾಗ್ಯೂ ಕಲ್ಲಡ್ಕ ಪ್ರಭಾಕರ ಭಟ್ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿರುವದು ಖಂಡನೀಯ ಎಂದರು.

ಶುಭೋದಯ ಆಳ್ವ, ನೀರಜ್ ಪಾಲ್ ಇದ್ದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com