Breaking News

ಸಿದ್ದರಾಮಯ್ಯ ವಿರುದ್ಧ ಶಾಸಕ ಪೂಂಜಾ ವಿವಾದಾತ್ಮಕ ಹೇಳಿಕೆ: ದೂರು ದಾಖಲು

 

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕವು ದೂರು ನೀಡಿದೆ.

  1.  

ಇದೇ 22 ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂಗಳ ಕೊಲೆ ಮಾಡಿದವರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಲಾಗಿದೆ.

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜಾರಿ, ಉಪಾಧ್ಯಕ್ಷೆ ಮಮತಾ  , ಪ್ರಧಾನ ಕಾರ್ಯದರ್ಶಿ ಸುಮಂಗಲಾ ನಾಯ್ಕ್, ಕಾರ್ಯದರ್ಶಿ ಸಿಂಧೂ ಡೆನ್ನಿಸ್, ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ,  ಕುಸುಮಾ ಮಾಚಾರು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com