Breaking News

ಮಂಗಳೂರು ಬಜ್ಪೆ ನಿಲ್ದಾಣ: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ, ವಾಪಸ್

 

ಮಂಗಳೂರು: ದುಬೈಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಬಜ್ಪೆ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

  1.  

ಬೆಳಿಗ್ಗೆ 8.30 ಕ್ಕೆ ಮಂಗಳೂರಿನಿಂದ ದುಬೈಗೆ ಹೊರಡಲು ಸಿದ್ದವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.  ಪ್ರಯಾಣಿಕರನ್ನು ಹೊತ್ತ ವಿಮಾನವು ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗಲೇ ಹಕ್ಕಿ ಹಾರಿ ಬಂದು ವಿಮಾನದ ರೆಕ್ಕೆಗೆ ಬಡಿದಿದೆ. ಏಕಾಏಕಿ ರೆಕ್ಕೆಯ ಭಾಗಕ್ಕೆ ಡಿಕ್ಕಿಯಾಗಿದ್ದರಿಂದ ತಕ್ಷಣವೇ ಅಪಾಯದ ಸೂಚನೆ ಅರಿತ ಪೈಲಟ್, ನಿಲ್ದಾಣದ ಮಾಹಿತಿ ಕೇಂದ್ರಕ್ಕೆ ಸೂಚನೆ ರವಾನೆ ಮಾಡಿದ್ದಾರೆ. ಅಲ್ಲದೆ, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಸ್ ಬಂದಿದ್ದು ಕೂಡಲೇ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.

ನಂತರ, ಎಲ್ಲ ಪ್ರಯಾಣಿಕರನ್ನ ಇಳಿಸಿ ತಪಾಸಣೆ ಕೈಗೊಂಡಿದ್ದು ಅದೇ ವೇಳೆಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ಇಂಡಿಗೋ ವಿಮಾನದಲ್ಲಿ ದುಬೈ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲವಾದರೂ, ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣವೂ ನಿರ್ಮಾಣ ಆಯಿತು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com