Breaking News

ಕಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಪಲ್ಟಿ: 10 ಹೆಚ್ಚು ಮಂದಿಗೆ ಗಾಯ

 

ಕಾರವಾರ: ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

  1.  

ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಈ ಖಾಸಗಿ ಬಸ್ ನಲ್ಲಿ 36 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.  ಮಂಕಿ ಸಮೀಪ ಬಸ್ ಚಾಲಕ ಕಾರಿಗೆ  ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಹೆದ್ದಾರಿ ಪಕ್ಕದಲ್ಲಿ ಪಲ್ಟಿ ಆಗಿ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಭಟ್ಕಳ, ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com